Friday, March 13, 2026
HomeLocal Newsಫುಡ್‌ ಟ್ರಕ್‌ ಪ್ರಾರಂಭಿಸಬೇಕಾ? ಇಲ್ಲಿದೆ ಯೋಜನೆ!

ಫುಡ್‌ ಟ್ರಕ್‌ ಪ್ರಾರಂಭಿಸಬೇಕಾ? ಇಲ್ಲಿದೆ ಯೋಜನೆ!

ಕಾರವಾರ: ಅಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು.

ಉಳಿಕೆ ಮೊತ್ತವನ್ನು ಬ್ಯಾಂಕುಗಳ/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ಈ ಯೋಜನೆಗೆ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಕಾರವಾರ, ಯಲ್ಲಾಪುರ, ಕ್ಷೇತ್ರದ ಮರಾಠಾ ಜನಾಂಗದ ಹಿಂದುಳಿದ ವರ್ಗಗಳ ಪ್ರವರ್ಗ-3 ಬಿ ಅಡಿಯಲ್ಲಿ 2(ಎ) ರುಣದ 2 (ಎಫ್)ವರೆಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 30 ಸಾವಿರದ ಒಳಗಿರಬೇಕು. ಅರ್ಜಿದಾರರ ವಯಸ್ಸು 21ರಿಂದ 45 ವರ್ಷಗಳ ಮಿತಿಯಲ್ಲಿರಬೇಕು.

ಆಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯನ್ನು ಪಡೆಯಲು ಮರಾಠಾ ಜನಾಂಗದಲ್ಲಿ ಪ್ರವರ್ಗ 3-ಬಿ ಅಡಿಯಲ್ಲಿ 2(ಎ) ರಿಂದ 2(ಎಫ್) ವರೆಗೆ ಬರುವ , ಮರಾಠ, ಮರಾಠ, ಅರೆಕ್ಷತ್ರಿ, ಅರೆ ಮರಾಠ, ಆರ್ಯ, ಆರ್ಯರು, ಕೊಂಕಣ ಮರಾಠ, ಕ್ಷತ್ರಿಯ ಮರಾಠ, ಕುಳವಾಡಿ ಜಾತಿಗಳಿಗೆ ಅನ್ವಯವಾಗುತ್ತದೆ.

ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು, ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು, ಶ್ರೀ/ ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವೂ ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿ  ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಮರಾಠಾ ಜನಾಂಗದ ಹಿಂದುಳಿದ ವರ್ಗಗಳ ಅರ್ಜಿದಾರರು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಲು ಮಾ.5 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://kmcdc/karnataka.gov.in/kn ನಲ್ಲಿ ಅಥವಾ ನಿಗಮದ ಸಹಾಯವಾಣಿ ಸಂಖ್ಯೆ:080-29903994 ಮತ್ತು 8867537799 ಸಂಪರ್ಕಿಸುವಂತೆ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share