Friday, July 24, 2026
Join WhatsApp Group
HomeLocal Newsಸಿವಿಲ್‌ ಜಡ್ಜ್‌ ಪರೀಕ್ಷೆಯಲ್ಲಿ ಶಿರಸಿಯ ಸುಮಂತ್ ನಾಯ್ಕ್ ಸಾಧನೆ

ಸಿವಿಲ್‌ ಜಡ್ಜ್‌ ಪರೀಕ್ಷೆಯಲ್ಲಿ ಶಿರಸಿಯ ಸುಮಂತ್ ನಾಯ್ಕ್ ಸಾಧನೆ

ಶಿರಸಿ: ಸಿವಿಲ್ ಜಡ್ಜ್ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 2ನೇ ಸ್ಥಾನ ಗಳಿಸುವ ಮೂಲಕ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಸುಮಂತ್ ಮಂಜುನಾಥ್ ನಾಯ್ಕ್ ತಮ್ಮ ಮೊದಲ ಪ್ರಯತ್ನದಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ಅಂತಿಮ ಲಿಖಿತ ಪರೀಕ್ಷೆಯ ಬಳಿಕ ಜನವರಿಯಲ್ಲಿ ಸಂದರ್ಶನ ಪ್ರಕ್ರಿಯೆ ನಡೆಯಿತು. ಇದೀಗ ಕರ್ನಾಟಕ ಹೈಕೋರ್ಟ್‌ 83 ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಿದ್ದು, ಅದರಲ್ಲಿ ಸುಮಂತ್ ನಾಯ್ಕ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸುಮಂತ್ ಅವರು ಬೆಂಗಳೂರು ಲೋಕಾಯುಕ್ತದ ಸರ್ಕಾರಿ ಅಭಿಯೋಜಕರಾದ ಮಂಜುನಾಥ್ ನಾಯ್ಕ್ ಹಾಗೂ ವಕೀಲೆ ಸುಜಾತಾ ನಾಯ್ಕ್ ದಂಪತಿಯ ಪುತ್ರ. ಶೈಕ್ಷಣಿಕ ಕ್ಷೇತ್ರದಲ್ಲಿ ಸದಾ ಮೇಲುಗೈ ಸಾಧಿಸಿರುವ ಅವರು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಚುರುಕುತನ ತೋರಿದ್ದು, ಹಲವು ವೇದಿಕೆಗಳಲ್ಲಿ ತಮ್ಮ ಪ್ರತಿಭೆ ಮೆರೆದಿದ್ದಾರೆ.

ಮೊದಲ ಪ್ರಯತ್ನದಲ್ಲೇ ಇಂತಹ ಸಾಧನೆ ಮಾಡಿರುವುದು ಕುಟುಂಬಸ್ಥರು, ಸ್ನೇಹಿತರು ಹಾಗೂ ತಾಲೂಕಿನ ಜನರಲ್ಲಿ ಹರ್ಷದ ಅಲೆ ಮೂಡಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಸಾಕಾರಗೊಂಡ ಹಿನ್ನೆಲೆಯಲ್ಲಿ ಸುಮಂತ್ ಅವರ ಸಾಧನೆಗೆ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share