Monday, September 7, 2026
Join WhatsApp Group
HomeCrimeಹೊನ್ನಾವರ | ಕಾಡಿನಲ್ಲಿ ಕೋಳಿ ಅಂಕ; ಮೂವರು ವಶಕ್ಕೆ, ಓರ್ವ ಪರಾರಿ

ಹೊನ್ನಾವರ | ಕಾಡಿನಲ್ಲಿ ಕೋಳಿ ಅಂಕ; ಮೂವರು ವಶಕ್ಕೆ, ಓರ್ವ ಪರಾರಿ

ಹೊನ್ನಾವರ: ತಾಲೂಕಿನ ಕರ್ಕಿ ರೈಲ್ವೆ ನಿಲ್ದಾಣದ ಸಮೀಪದ ಅರಣ್ಯ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಮೂವರನ್ನು ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿದ್ದು, ಮತ್ತೋರ್ವ ಪರಾರಿಯಾಗಿರುವ ಘಟನೆ ಆ.30ರಂದು ನಡೆದಿದೆ.

ಆ.30ರಂದು ಸಂಜೆ 5 ಗಂಟೆ ಸುಮಾರಿಗೆ ಆರೋಪಿತರು ಕರ್ಕಿ ರೈಲ್ವೆ ನಿಲ್ದಾಣದ ಬಳಿಯ ಅರಣ್ಯ ಪ್ರದೇಶದಲ್ಲಿ ಕೋಳಿ ಹುಂಜಗಳನ್ನು ಕಾದಾಟಕ್ಕೆ ಬಿಟ್ಟು, ಅವುಗಳ ಮೇಲೆ ಹಣವನ್ನು ಪಣಕ್ಕಿಟ್ಟು ಜೂಜಾಟ ಆಡುತ್ತಿದ್ದರೆಂಬ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಮಂಜುನಾಥ ತಿಮ್ಮಪ್ಪ ಗೌಡ (40), ಶಿವಾನಂದ ಅಲಿಯಾಸ್ ಶ್ರೀನಿವಾಸ ಮಾಸ್ತಿ ಮುಕ್ರಿ (31) ಹಾಗೂ ಅನಂತ ವೆಂಕಟರಮಣ ಪಟಗಾರ (32) ಎಂಬ ಮೂವರು ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿದ್ದು, ಮತ್ತೋರ್ವ ಆರೋಪಿತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಹೊನ್ನಾವರ ತಾಲೂಕಿನ ಹಳದಿಪುರ ಅಗ್ರಹಾರ, ಹಬ್ಬುಗದ್ದೆ ಹಾಗೂ ಕುಮಟಾ ತಾಲೂಕಿನ ಹಳಕಾರ ನಿವಾಸಿಗಳಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ವೇಳೆ ಅಂಕಕ್ಕೆ ಬಳಸಿದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯ ಪಿಎಸ್‌ಐ (ತನಿಖೆ-01) ಮಹಾಂತೇಶ ವಾಲ್ಮೀಕಿ ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share