Monday, September 7, 2026
Join WhatsApp Group
HomeCrimeಕುಮಟಾ | ಬೊಲೆರೋದಲ್ಲಿದ್ದ 48 ಸಾವಿರ ರೂ ಕಳವು

ಕುಮಟಾ | ಬೊಲೆರೋದಲ್ಲಿದ್ದ 48 ಸಾವಿರ ರೂ ಕಳವು

ಕುಮಟಾ: ಎಪಿಎಂಸಿ ಆವರಣದಲ್ಲಿ ನಿಲ್ಲಿಸಿದ್ದ ಬೊಲೆರೋ ಪಿಕ್‌ಅಪ್ ವಾಹನದ ಡ್ಯಾಶ್‌ಬೋರ್ಡ್‌ನಲ್ಲಿಟ್ಟಿದ್ದ 48 ಸಾವಿರ ರೂ ನಗದು ಹಣ ಕಳ್ಳತನವಾಗಿರುವ ಘಟನೆ ಕುಮಟಾದಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ಹಳದೀಪುರ, ಪಳ್ಳಿಕೇರಿ ನಿವಾಸಿ ಹಾಗೂ ಅಡಿಕೆ ವ್ಯಾಪಾರಿ ಮೊಹಮ್ಮದ್ ಮುಕ್ತಿಯಾರ್ (42) ಅವರು ತಮ್ಮ ಬೊಲೆರೋ ಪಿಕ್‌ಅಪ್‌ (KA-47/6172) ಅನ್ನು ಕುಮಟಾ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಿಲ್ಲಿಸಿದ್ದರು. ಸೆ.1ರಂದು ಬೆಳಗ್ಗೆ 10.15ರಿಂದ 11.15ರ ನಡುವಿನ ಅವಧಿಯಲ್ಲಿ ವಾಹನದ ಡ್ಯಾಶ್‌ಬೋರ್ಡ್‌ನಲ್ಲಿದ್ದ 48 ಸಾವಿರ ರೂ ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆ ಕುರಿತು ಮೊಹಮ್ಮದ್ ಮುಕ್ತಿಯಾರ್ ಅವರು ಸೆ.1ರಂದು ಸಂಜೆ 5.45ಕ್ಕೆ ಕುಮಟಾ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share