ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಓಸಿ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರಿಕಾಂಬ ನಗರ ನಿವಾಸಿ ಜಮಾಲಸಾಬ ತಂದೆ ಬಾಬುಸಾಬ ಬ್ಯಾಡಗಿ (42) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಪೊಲೀಸ್ ದೂರಿನ ಪ್ರಕಾರ, ಸೆ.1ರಂದು ಸಂಜೆ ಸುಮಾರು 7.30ರ ವೇಳೆಗೆ ಮುಂಡಗೋಡ ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ನಿಂತಿದ್ದ ಆರೋಪಿತನು, ರಸ್ತೆಯಲ್ಲಿ ಸಂಚರಿಸುತ್ತಿದ್ದವರನ್ನು ಕರೆದು, 1ಕ್ಕೆ 80 ರೂ ನೀಡುವುದಾಗಿ ಹೇಳಿ ಅಂಕಿ-ಸಂಖ್ಯೆಗಳ ಮೇಲೆ ಹಣ ಪಣಕ್ಕಿಟ್ಟು ಓಸಿ ಜೂಜಾಟ ನಡೆಸುತ್ತಿದ್ದ ಎನ್ನಲಾಗಿದೆ.
ಈ ಕುರಿತು ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ ಆರೋಪಿತನ ಬಳಿಯಿಂದ 510 ರೂ ನಗದು, ಓಸಿ ಅಂಕಿ-ಸಂಖ್ಯೆ ಬರೆದ ಒಂದು ಚೀಟಿ ಹಾಗೂ ಒಂದು ಬಾಲ್‌ಪೆನ್ ವಶಪಡಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.