Monday, September 7, 2026
Join WhatsApp Group
HomeLocal Newsಐಸಿಐಸಿಐ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: ಸೆ.5ಕ್ಕೆ ನೇರ ಸಂದರ್ಶನ

ಐಸಿಐಸಿಐ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: ಸೆ.5ಕ್ಕೆ ನೇರ ಸಂದರ್ಶನ

ಕಾರವಾರ: ಪದವಿ ಹೊಂದಿರುವ ಯುವಕ–ಯುವತಿಯರಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಐಸಿಐಸಿಐ ಬ್ಯಾಂಕ್‌ನ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ.

ಸೆಪ್ಟೆಂಬರ್ 5ರಂದು ಕಾರವಾರದ ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಹತ್ತಿರ, ಸಿವಿಲ್ ಕೋರ್ಟ್ ರಸ್ತೆಯಲ್ಲಿರುವ ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ಐಸಿಐಸಿಐ ಬ್ಯಾಂಕ್‌ನಲ್ಲಿ ಸೇಲ್ಸ್ ಮತ್ತು ರಿಲೇಶನ್‌ಶಿಪ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ನಡೆಯಲಿದ್ದು, 18ರಿಂದ 25 ವರ್ಷದೊಳಗಿನ ಪದವೀಧರ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತರ ಕನ್ನಡ ಜಿಲ್ಲೆ, ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿ ಉದ್ಯೋಗದ ಅವಕಾಶ ಇರಲಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ನಿಗದಿತ ದಿನದಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಯೋಜನಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. 8310044796 ಅಥವಾ ಕಚೇರಿ ದೂರವಾಣಿ 08382-226386ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂದರ್ಶನದ ದಿನಾಂಕ: ಸೆಪ್ಟೆಂಬರ್ 5
ವಯೋಮಿತಿ: 18–25 ವರ್ಷ
ಹುದ್ದೆ: ಸೇಲ್ಸ್ ಮತ್ತು ರಿಲೇಶನ್‌ಶಿಪ್ ಮ್ಯಾನೇಜರ್
ಅರ್ಹತೆ: ಪದವಿ
ಸ್ಥಳ: ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share