Monday, September 7, 2026
Join WhatsApp Group
HomeCrimeನೂತನ ASP ರಾನು ಗುಪ್ತಾ ಎಂಟ್ರಿ; ಅಕ್ರಮ ಮರಳುಗಾರರಿಗೆ ಶಾಕ್!

ನೂತನ ASP ರಾನು ಗುಪ್ತಾ ಎಂಟ್ರಿ; ಅಕ್ರಮ ಮರಳುಗಾರರಿಗೆ ಶಾಕ್!

ಭಟ್ಕಳ: ಭಟ್ಕಳ ಉಪವಿಭಾಗದ ನೂತನ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ASP) ರಾನು ಗುಪ್ತಾ IPS ಅವರು ಅಧಿಕಾರ ವಹಿಸಿಕೊಂಡ 24 ಗಂಟೆಯೊಳಗೆ ಅಕ್ರಮ ಮರಳು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿ ಆರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದು, ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಸೆಪ್ಟೆಂಬರ್ 1ರ ರಾತ್ರಿ 11 ಗಂಟೆಯಿಂದ ಸೆಪ್ಟೆಂಬರ್ 2ರ ಬೆಳಗಿನ ಜಾವ 3 ಗಂಟೆಯವರೆಗೆ ASP ರಾನು ಗುಪ್ತಾ ಅವರ ನೇತೃತ್ವದಲ್ಲಿ ಮಂಕಿ ಮತ್ತು ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಮಾನ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಿಸುತ್ತಿದ್ದ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೆ ಮೂರು ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾರ್ಯಾಚರಣೆ ವೇಳೆ ಹರೀಶ್, ಅಜಿತ್, ಆನಂದ್, ಪ್ರಕಾಶ್, ಮಾರುತಿ ಹಾಗೂ ನಜೀರ್ ಎಂಬ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಅಕ್ರಮವಾಗಿ ಮರಳು ಸಾಗಾಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಕಿ ಹಾಗೂ ಮುರ್ಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ನಡೆದ ಈ ಕ್ಷಿಪ್ರ ಕಾರ್ಯಾಚರಣೆ ಭಟ್ಕಳ ಉಪವಿಭಾಗದಲ್ಲಿ ಗಮನ ಸೆಳೆದಿದೆ. ಅಕ್ರಮ ಮರಳು ಸಾಗಾಟದ ವಿರುದ್ಧ ASP ರಾನು ಗುಪ್ತಾ ಅವರ ಖಡಕ್‌ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರಲ್ಲೂ ಈ ಕಾರ್ಯಾಚರಣೆ ನಡುಕ ಮೂಡಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share