Ad
Ad
Ad
Home Local News ಶಿರಸಿ | ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆಗೆ ಆಗ್ರಹ

ಶಿರಸಿ | ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆಗೆ ಆಗ್ರಹ

0
4

ಕಸ್ತೂರಿ ರಂಗನ್ ವರದಿ ವಿರೋಧಿಸಿ ಆಕ್ಷೇಪ ಪತ್ರ ಸಲ್ಲಿಕೆ

ಶಿರಸಿ: ಕಸ್ತೂರಿ ರಂಗನ್ ವರದಿಯಡಿ ಉತ್ತರ ಕನ್ನಡ ಜಿಲ್ಲೆಯ 567 ಗ್ರಾಮಗಳನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸುವುದರಿಂದ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆಕ್ಷೇಪ ವ್ಯಕ್ತಪಡಿಸಿರುವ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ, ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವಂತೆ ಆಗ್ರಹಿಸಿದೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆಯುತ್ತಿರುವ ಒಂದು ಲಕ್ಷ ಆಕ್ಷೇಪ ಪತ್ರಗಳ ಅಭಿಯಾನದ ಅಂಗವಾಗಿ ಶಿರಸಿ ನಗರಸಭೆಯ ಬಯಲು ರಂಗಮಂದಿರದಲ್ಲಿ ನಡೆದ ಬೃಹತ್ ಸಭೆಯಲ್ಲಿ ಸಹಸ್ರಾರು ಆಕ್ಷೇಪ ಪತ್ರಗಳನ್ನು ಸಲ್ಲಿಸಲಾಯಿತು.

ಸಭೆಯಲ್ಲಿ ಮಾತನಾಡಿದ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ, ಕಸ್ತೂರಿ ರಂಗನ್ ವರದಿಯಲ್ಲಿ ಜನವಸತಿ ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶದ ವ್ಯಾಪ್ತಿಯಿಂದ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು.ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾದ ಪ್ರದೇಶಗಳ ವಾಸ್ತವ ಪರಿಸ್ಥಿತಿ, ಜನಜೀವನ ಹಾಗೂ ಅರಣ್ಯವಾಸಿಗಳ ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಸಲು ತಜ್ಞರ ಸಮಿತಿಯನ್ನು ರಚಿಸಬೇಕು. ಸಮಿತಿಯ ವರದಿಯ ಆಧಾರದ ಮೇಲೆ ತಾಂತ್ರಿಕ ಹಾಗೂ ವೈಜ್ಞಾನಿಕ ಅಂಶಗಳನ್ನು ಒಳಗೊಂಡಂತೆ ಕೇಂದ್ರ ಸರ್ಕಾರಕ್ಕೆ ಆಕ್ಷೇಪ ಸಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.

ಕೇಂದ್ರ ಪರಿಸರ ಇಲಾಖೆಯಿಂದ ಪ್ರಕಟಿಸಿರುವ ಸೂಕ್ಷ್ಮ ಪ್ರದೇಶದ ಅಧಿಸೂಚನೆಯು ಅವೈಜ್ಞಾನಿಕವಾಗಿದೆ ಎಂಬುದು ಹೋರಾಟಗಾರರ ಅಭಿಪ್ರಾಯವಾಗಿದೆ. ವರದಿ ಜಾರಿಯಿಂದ ಜನಜೀವನದ ಮೇಲೆ ಉಂಟಾಗಬಹುದಾದ ಪರಿಣಾಮಗಳು ಹಾಗೂ ಅರಣ್ಯವಾಸಿಗಳಲ್ಲಿ ಉಂಟಾಗಬಹುದಾದ ಅಭದ್ರತೆಯ ಕುರಿತು ವೈಜ್ಞಾನಿಕ ಹಾಗೂ ತಾಂತ್ರಿಕ ದಾಖಲೆಗಳೊಂದಿಗೆ ರಾಜ್ಯ ಸರ್ಕಾರವು ಕೇಂದ್ರಕ್ಕೆ ಆಕ್ಷೇಪ ಸಲ್ಲಿಸಬೇಕು ಎಂದು ರವೀಂದ್ರ ನಾಯ್ಕ ಒತ್ತಾಯಿಸಿದರು.

ಸೂಕ್ಷ್ಮ ಪ್ರದೇಶವೆಂದು ಗುರುತಿಸಿರುವ ಗ್ರಾಮಗಳಲ್ಲಿ ಗ್ರಾಮಸಭೆ ನಡೆಸಿ, ಸ್ಥಳೀಯ ಜನಜೀವನದ ಪರಿಸ್ಥಿತಿ ಹಾಗೂ ಗ್ರಾಮಸ್ಥರ ಅಭಿಪ್ರಾಯವನ್ನು ದಾಖಲಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಮಹಾಬಲೇಶ್ವರ ನಾಯ್ಕ ಬೇಡ್ಕಣಿ ಸ್ವಾಗತಿಸಿದರು. ಶೋಭಾ ನಾಯ್ಕ, ಎಸ್.ಎನ್. ಹೆಗಡೆ, ರಾಘು ಗುಡ್ಡಾಪುರ, ಶ್ರೀಧರ ಹೆಗಡೆ, ನಾಗಪತಿ ಗೌಡ ಹುಕ್ಕಳ್ಳಿ, ಕಿರಣ ಮರಾಠಿ ದೇವನಳ್ಳಿ ಸೇರಿದಂತೆ ಹಲವರು ಮಾತನಾಡಿದರು.

ಕೇಂದ್ರ ಸರ್ಕಾರದ ಅಧಿಸೂಚನೆಯ ಆಕ್ಷೇಪ ಸ್ವೀಕರಿಸುವಲ್ಲಿ ಜಿಲ್ಲಾಡಳಿತದ ಮಾರ್ಗದರ್ಶನದಂತೆ ವೇದಿಕೆಯ ಮೇಲೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಅಮಿತ್‌ ಚೌಹಾಣ, ನಗರಸಭೆ ಆಯುಕ್ತರಾದ ಪ್ರಕಾಶ ಆಕ್ಷೇಪ ಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಿ ಪಿ ಐ ಸಂಪತ್‌ ಕುಮಾರ್ ಉಪಸ್ಥಿತರಿದ್ದರು.ಜಿಲ್ಲಾ ಸಂಚಾಲಕ ಇಬ್ರಾಹಿಂ ಗೌಡಳ್ಳಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಕೆ.ಟಿ. ನಾಯ್ಕ, ರಾಜು ನರೇಬೈಲ್, ಅಣ್ಣಪ್ಪ ನಾಯ್ಕ ಕಣ್ಣಿಗೇರಿ, ಆರ್.ಟಿ. ನಾಯ್ಕ ವಾಜಗೋಡ, ಸ್ವಾತಿ ಜೈನ್, ಮಲ್ಲೇಶಿ, ಸತೀಶ್ ನಾಯ್ಕ ತ್ಯಾಗಲಿ, ಲಕ್ಷ್ಮಣ ನಾಯ್ಕ, ಕಲ್ಪನಾ ನರೇಬೈಲ್, ಯಶೋಧಾ ನೌಟೂರು ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!