Ad
Ad
Ad
Home Local News ಗಣೇಶ ಹಬ್ಬಕ್ಕೆ ಊರಿಗೆ ಹೋಗ್ತೀರಾ? 312 ವಿಶೇಷ ಬಸ್‌ಗಳು ಸಿದ್ಧ!

ಗಣೇಶ ಹಬ್ಬಕ್ಕೆ ಊರಿಗೆ ಹೋಗ್ತೀರಾ? 312 ವಿಶೇಷ ಬಸ್‌ಗಳು ಸಿದ್ಧ!

0
3

ಕಾರವಾರ: ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ವಿವಿಧ ವಿಭಾಗಗಳಿಂದ 312 ಹೆಚ್ಚುವರಿ ವಿಶೇಷ ಬಸ್‌ಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.

ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಹಾಗೂ ಬಾಗಲಕೋಟೆ ವಿಭಾಗಗಳಿಂದ ಈ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸೆ.11ರಿಂದ ಸೆ.13ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಅಂತರರಾಜ್ಯ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್‌ಗಳು ಸಂಚರಿಸಲಿವೆ. ಗಣೇಶ ಚತುರ್ಥಿ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳುವ ನಿರೀಕ್ಷೆಯಿದ್ದು, ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದು ಸಂಸ್ಥೆ ತಿಳಿಸಿದೆ.

ಗಣೇಶ ಹಬ್ಬದ ಬಳಿಕ ಸೆ.14ರಿಂದ ಮುಂದಿನ ದಿನಗಳಲ್ಲಿಯೂ ಪ್ರಮುಖ ಸ್ಥಳಗಳಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗುತ್ತದೆ.

ಸಾರ್ವಜನಿಕರು ಈ ವಿಶೇಷ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವುದರೊಂದಿಗೆ ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್‌ಗಳಲ್ಲೇ ಸಂಚರಿಸುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!