Monday, September 7, 2026
Join WhatsApp Group
HomeLocal Newsಖಾಸಗಿ ಕಂಪನಿಯಲ್ಲಿ ಉದ್ಯೋಗಾವಕಾಶ: ಸೆ.9ರಂದು ನೇರ ಸಂದರ್ಶನ

ಖಾಸಗಿ ಕಂಪನಿಯಲ್ಲಿ ಉದ್ಯೋಗಾವಕಾಶ: ಸೆ.9ರಂದು ನೇರ ಸಂದರ್ಶನ

ಕಾರವಾರ: ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.9ರಂದು ಕಾರವಾರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರದ ವತಿಯಿಂದ ಖಾಸಗಿ ಕಂಪನಿಯಾದ ಮೈಟೈಲ್ಸ್ ಪ್ರೈ.ಲಿ.ಯಲ್ಲಿ ಖಾಲಿ ಇರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಾಗಿ ನೇರ ಸಂದರ್ಶನ ನಡೆಯಲಿದೆ.

ಸೆ.9ರಂದು ಯೋಜನಾ ಉದ್ಯೋಗ ವಿನಿಮಯ ಕಚೇರಿ, ಶ್ರೀಮತಿ ಪ್ರೇಮಾಬಾಯಿ ರಾಯ್ಕರ್ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಮೀಪ, ಸಿವಿಲ್ ಕೋರ್ಟ್ ರಸ್ತೆ, ಕಾರವಾರದಲ್ಲಿ ಸಂದರ್ಶನ ನಡೆಯಲಿದೆ.

ಈ ಉದ್ಯೋಗಕ್ಕೆ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರು ಉದ್ಯೋಗ ಸ್ಥಳವಾಗಿರಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೋಮಾ ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಉದ್ಯೋಗದ ನಿರೀಕ್ಷೆಯಲ್ಲಿರುವ ಸ್ಥಳೀಯ ಯುವಜನರಿಗೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಯೋಜನಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಯೋಜನಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಥವಾ ಮೊಬೈಲ್-8310044796, ಕಚೇರಿ ದೂರವಾಣಿ: 08382-226386ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share