Saturday, September 19, 2026
Join WhatsApp Group
HomeLocal Newsಮುತ್ತೂಟ್ ಫಿನ್‌ಕಾರ್ಪ್‌ನಲ್ಲಿ ಉದ್ಯೋಗಾವಕಾಶ

ಮುತ್ತೂಟ್ ಫಿನ್‌ಕಾರ್ಪ್‌ನಲ್ಲಿ ಉದ್ಯೋಗಾವಕಾಶ

ಕಾರವಾರ: ಪದವಿ ಹೊಂದಿರುವ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರದ ವತಿಯಿಂದ ಖಾಸಗಿ ಕಂಪನಿಯಾದ ಮುತ್ತೂಟ್ ಫಿನ್‌ಕಾರ್ಪ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಸೆಪ್ಟೆಂಬರ್ 11ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.

ಕಾರವಾರದ ಶ್ರೀಮತಿ ಪ್ರೇಮಾಬಾಯಿ ರಾಯ್ಕರ ಬಿಲ್ಡಿಂಗ್, ಪಂಜಾಬ್ ನ್ಯಾಶನಲ್ ಬ್ಯಾಂಕ್ ಸಮೀಪ, ಸಿವಿಲ್ ಕೋರ್ಟ್ ರಸ್ತೆಯಲ್ಲಿರುವ ಯೋಜನಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

18ರಿಂದ 33 ವರ್ಷದೊಳಗಿನ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉದ್ಯೋಗ ಸ್ಥಳ ಕಾರವಾರ ಆಗಿರಲಿದೆ.

ಅರ್ಹತೆ ಹೊಂದಿರುವ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿ ತಿಳಿಸಿದೆ.

ಉದ್ಯೋಗಾವಕಾಶದ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತರು ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಅಥವಾ 8310044796 ಮೊಬೈಲ್ ಸಂಖ್ಯೆ ಹಾಗೂ 08382-226386 ಕಚೇರಿ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share