Ad
Home Uncategorized ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಸಾಂದೀಪನಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

0
33

ಕಾರವಾರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 2026-27ನೇ ಸಾಲಿನ ಸಾಂದೀಪನಿ ಶಿಷ್ಯವೇತನ ಯೋಜನೆ ಜಾರಿಗೆ ತರಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಇ-ಆಡಳಿತ ಇಲಾಖೆಯ ರಾಜ್ಯ ಶಿಷ್ಯವೇತನ ತಂತ್ರಾಂಶ (SSP) ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಥಮ, ದ್ವಿತೀಯ ಪಿಯುಸಿ ಹಾಗೂ ಸಾಮಾನ್ಯ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕ 15 ಸಾವಿರ ರೂ ನಿರ್ವಹಣಾ ವೆಚ್ಚದ ಶಿಷ್ಯವೇತನ ನೀಡಲಾಗುತ್ತದೆ.

ಇದರ ಜೊತೆಗೆ CET, NEET ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ ಮೂರನೇ ಎರಡರಷ್ಟು (2/3) ಭಾಗದ ಮೊತ್ತವನ್ನು ಮರುಪಾವತಿಸಲಾಗುತ್ತದೆ.

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅಲ್ಲದೆ ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣ ಪತ್ರ (EWS) ಹೊಂದಿರಬೇಕು.

ವೃತ್ತಿಪರ ಕೋರ್ಸ್‌ಗಳಿಗೆ ಮ್ಯಾನೇಜ್‌ಮೆಂಟ್ ಕೋಟಾ ಅಥವಾ COMED-K ಮೂಲಕ ಪ್ರವೇಶ ಪಡೆದ ವಿದ್ಯಾರ್ಥಿಗಳು ಶುಲ್ಕ ಮರುಪಾವತಿ ಸೌಲಭ್ಯಕ್ಕೆ ಅರ್ಹರಾಗಿರುವುದಿಲ್ಲ.

ಅರ್ಜಿದಾರರ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. ಬ್ಯಾಂಕ್ ಖಾತೆಯು NPCI ಅಡಿಯಲ್ಲಿ ಸೀಡ್ ಆಗಿರುವುದು ಕಡ್ಡಾಯವಾಗಿದೆ.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್‌ಸೈಟ್ www.ksbdb.karnataka.gov.in ಮೂಲಕ ಡಿಸೆಂಬರ್ 31ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರವಾರದ ನ್ಯೂ ಕೆ.ಎಚ್.ಬಿ. ಕಾಲೋನಿ, ಹಬ್ಬುವಾಡದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. 7975633671 ಮೊಬೈಲ್ ಸಂಖ್ಯೆಯಲ್ಲಿಯೂ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!