ಶಿರಸಿ: ಸೋಂದಾ ಸ್ವರ್ಣವಲ್ಲಿ ಮಠದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಕುಟುಂಬ ಸಮೇತರಾಗಿ ಪಾಲ್ಗೊಂಡು ಶ್ರೀಗಳ ಪಾದುಕಾ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು.
ಕುಟುಂಬಸ್ಥರೊಂದಿಗೆ ಮಠಕ್ಕೆ ಭೇಟಿ ನೀಡಿದ ಅವರು ಶ್ರದ್ಧಾ-ಭಕ್ತಿಯಿಂದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳ ದಿವ್ಯ ಆಶೀರ್ವಾದ ಹಾಗೂ ಮಂತ್ರಾಕ್ಷತೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅನಂತಮೂರ್ತಿ ಹೆಗಡೆ, “ಪೂಜ್ಯ ಗುರುಗಳ ಚಾತುರ್ಮಾಸ್ಯ ವ್ರತಾಚರಣೆಯಂತಹ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರುಗಳ ಕೃಪೆಗೆ ಪಾತ್ರರಾಗಿರುವುದು ನನಗೆ ಧನ್ಯತೆ ಮೂಡಿಸಿದೆ. ಗುರುಗಳ ಆಶೀರ್ವಾದ ಸದಾ ಎಲ್ಲ ಭಕ್ತರ ಮೇಲಿರಲಿ” ಎಂದು ಆಶಿಸಿದರು.