ಮುಂಡಗೋಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾ ಸೇವೆ ಅಭಿಯಾನ’ ಕಾರ್ಯಕ್ರಮವನ್ನು ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಸೆ.12ರಂದು ಶನಿವಾರ ಮುಂಡಗೋಡ ತಾಲೂಕಿನ ಪಾಳಾದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳನ್ನು ಆಲಿಸಲಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರ ಕಾರ್ಯಾಲಯ ತಿಳಿಸಿದೆ.
ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದು ‘ಪ್ರಜಾ ಸೇವೆ ಅಭಿಯಾನ’ದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ.