ಯಲ್ಲಾಪುರ: ತಾಲೂಕಿನ ಲಿಂಗನಕೊಪ್ಪದಲ್ಲಿ ಶ್ರೀ ಗಜಾನನೋತ್ಸವ ಸಮಿತಿ ವತಿಯಿಂದ 10ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 20ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಸೆ.14ರಂದು ಆರಂಭವಾಗುವ ಗಣೇಶೋತ್ಸವದಲ್ಲಿ ಪ್ರತಿದಿನ ಮಧ್ಯಾಹ್ನ 1 ಗಂಟೆಗೆ ಹಾಗೂ ಸಂಜೆ 7.30ಕ್ಕೆ ವಿಶೇಷ ಪೂಜೆ ನಡೆಯಲಿದೆ. ಸೆ.18ರಂದು ಶುಕ್ರವಾರ ಬೆಳಗ್ಗೆ 11 ಗಂಟೆಗೆ ಶ್ರೀ ಸತ್ಯಗಣಪತಿ ಪೂಜೆ ನೆರವೇರಲಿದ್ದು, ನಂತರ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ.
ಸೆ.19ರಂದು ಶನಿವಾರ ಗಣಹವನ ಹಾಗೂ ಅನ್ನ ಸಂತರ್ಪಣೆ ಆಯೋಜಿಸಲಾಗಿದೆ. ಸೆ.20ರಂದು ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಯೊಂದಿಗೆ ಏಳು ದಿನಗಳ ಗಣೇಶೋತ್ಸವಕ್ಕೆ ತೆರೆ ಬೀಳಲಿದೆ.
ಪೂಜಾ ಸೇವೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಲು ಇಚ್ಛಿಸುವ ಭಕ್ತರು ಮುಂಚಿತವಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಸಮಿತಿ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9481861661, 8431930713 ಹಾಗೂ 9483999995 ಸಂಖ್ಯೆಗೆ ಸಂಪರ್ಕಿಸಬಹುದು.
ಗಣೇಶೋತ್ಸವದ ಅಂಗವಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತನು-ಮನ-ಧನದಿಂದ ಸಹಾಯ-ಸಹಕಾರ ನೀಡುವ ಮೂಲಕ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ಗಜಾನನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ ಪಾಟೀಲ ಸಹ ಕಾರ್ಯದರ್ಶಿ ನವೀನ ಅಂಕೋಲೆಕರ ವಿನಂತಿಸಿದ್ದಾರೆ.