Saturday, September 19, 2026
Join WhatsApp Group
HomeLocal Newsಬ್ರಹ್ಮಾನಂದ ಶ್ರೀಗಳ ಪಾದಪೂಜೆ ನೆರವೇರಿಸಿದ ಅನಂತಮೂರ್ತಿ ಹೆಗಡೆ ಬಳಗ

ಬ್ರಹ್ಮಾನಂದ ಶ್ರೀಗಳ ಪಾದಪೂಜೆ ನೆರವೇರಿಸಿದ ಅನಂತಮೂರ್ತಿ ಹೆಗಡೆ ಬಳಗ

ಬೈಂದೂರು: ಶಿರಸಿ, ಸಿದ್ದಾಪುರ ಹಾಗೂ ಬನವಾಸಿ ಭಾಗದ ಭಕ್ತರೊಂದಿಗೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಬೈಂದೂರು ತಾಲೂಕಿನ ಹೋಳಿಹೊಳೆಯಲ್ಲಿರುವ ಶ್ರೀ ಬಿಳಿಸೆಲೆ ವಿನಾಯಕ ದೇವಸ್ಥಾನದ ಪವಿತ್ರ ಪ್ರಾಂಗಣದಲ್ಲಿ ನಡೆಯುತ್ತಿರುವ ಪರಮಪೂಜ್ಯ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ಶ್ರದ್ಧಾ-ಭಕ್ತಿಯಿಂದ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಅನಂತಮೂರ್ತಿ ಹೆಗಡೆ ಅವರು ಶ್ರೀಗಳ ಪಾದಪೂಜೆ ನೆರವೇರಿಸಿ ಮಹಾಸಂಕಲ್ಪ ಕೈಗೊಂಡರು. ಬಳಿಕ ಶ್ರೀಗಳೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿ, ಗುರುಗಳ ಮಾರ್ಗದರ್ಶನ ಹಾಗೂ ಮಂತ್ರಾಕ್ಷತೆ ಪಡೆದುಕೊಂಡರು.

ಬನವಾಸಿ ಬಿಜೆಪಿ ಮಂಡಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಉಪಾಧ್ಯಕ್ಷರಾದ ರಾಘವೇಂದ್ರ ನಾಯ್ಕ ಬದನಗೋಡು, ಶಿನಾ ಪೂಜಾರಿ ಗೇರುಮನೆ, ವೇಣುಗೋಪಾಲ ಹೆಗಡೆ, ಪ್ರವೀಣ ಹೆಗಡೆ, ಸಿದ್ದಾಪುರದ ವಿನಾಯಕ ನಾಯ್ಕ, ಕೃಷ್ಣಮೂರ್ತಿ ನಾಯ್ಕ ಐಸೂರು, ಪ್ರಜೋತ್, ನವೀನ ನಾಯ್ಕ ಸೇರಿದಂತೆ ಅನಂತಮೂರ್ತಿ ಹೆಗಡೆ ಅವರ ಬಳಗದವರು ಶ್ರೀಗಳ ಪಾದಪೂಜೆ ಹಾಗೂ ಮಹಾಸಂಕಲ್ಪದಲ್ಲಿ ಪಾಲ್ಗೊಂಡರು. ಚಾತುರ್ಮಾಸ ಸಮಿತಿ ಅಧ್ಯಕ್ಷ ಗುರುರಾಜ್ ಗಂಟಿಹೊಳಿ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಅನಂತಮೂರ್ತಿ ಹೆಗಡೆ, ಚಾತುರ್ಮಾಸ್ಯ ವ್ರತಾಚರಣೆಯಂತಹ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮ ಕ್ಷೇತ್ರದ ಭಕ್ತರು ಹಾಗೂ ಆತ್ಮೀಯರೊಂದಿಗೆ ಪಾಲ್ಗೊಂಡು ಶ್ರೀಗಳ ಕೃಪೆಗೆ ಪಾತ್ರರಾಗಿರುವುದು ಧನ್ಯತೆಯ ಭಾವ ಮೂಡಿಸಿದೆ. ಶ್ರೀಗಳ ಆಶೀರ್ವಾದ ಎಲ್ಲರ ಮೇಲೂ ಸದಾ ಇರಲಿ ಎಂದು ಆಶಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share