ಮುಂಡಗೋಡ: ತಾಲೂಕಿನ ಬೆಡಸಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಳಗೇರಿ ಗ್ರಾಮದಲ್ಲಿ ಗಜಾನೋತ್ಸವ ಸಮಿತಿ ಸಭಾಂಗಣ ನಿರ್ಮಾಣ ಕಾಮಗಾರಿಗೆ ಶಾಸಕ ಶಿವರಾಮ ಹೆಬ್ಬಾರ್ ಬುಧವಾರ ಚಾಲನೆ ನೀಡಿದರು.
ಬಳಿಕ ಗಜಾನೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕರು, ಗಜಾನೋತ್ಸವದಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಆಚರಣೆಗಳು ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ಭಕ್ತಿ, ಒಗ್ಗಟ್ಟು ಮತ್ತು ಸಹೋದರತ್ವದ ಭಾವನೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗಜಾನೋತ್ಸವ ಸಮಿತಿಯ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.