Ad
Home Local News ಸೆ.19ರಂದು ನಾಲ್ಕು ಕ್ಷೇತ್ರಗಳಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಸೆ.19ರಂದು ನಾಲ್ಕು ಕ್ಷೇತ್ರಗಳಲ್ಲಿ ಪ್ರಜಾಸೇವೆ ಆಂದೋಲನ ಸಭೆ

0
3

ಕಾರವಾರ: ಜನರ ಅಹವಾಲುಗಳನ್ನು ಆಲಿಸಿ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ತಲುಪಿಸುವ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಸೆ.19ರಂದು ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗಿದೆ.

ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ಬೆಳಗ್ಗೆ 10.30 ಗಂಟೆಗೆ ಸಭೆಗಳು ನಡೆಯಲಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ ಉಪಾಧ್ಯಕ್ಷ ಹಾಗೂ ಶಾಸಕ ಮಂಕಾಳ ಎಸ್. ವೈದ್ಯ ಅವರ ನೇತೃತ್ವದಲ್ಲಿ ಭಟ್ಕಳ ತಾಲೂಕಿನ ಮಾವಿನ ಕುರ್ವಾ ಹೋಬಳಿಯ ಶ್ರೀ ನವದುರ್ಗಾ ದೇವಸ್ಥಾನದಲ್ಲಿ ಸಭೆ ನಡೆಯಲಿದೆ. ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ಶಾಸಕ ಭೀಮಣ್ಣ ಟಿ. ನಾಯ್ಕ ಅವರ ನೇತೃತ್ವದಲ್ಲಿ ಹುಲೇಕಲ್ ಹೋಬಳಿಯ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಸಭೆ ಆಯೋಜಿಸಲಾಗಿದೆ.

ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಅವರ ನೇತೃತ್ವದಲ್ಲಿ ಅಂಕೋಲಾ ತಾಲೂಕಿನ ಬೆಲೇಕೇರಿ ಹೋಬಳಿಯ ಅವರ್ಸಾ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಭೆ ನಡೆಯಲಿದೆ.

ಯಲ್ಲಾಪುರ-ಮುಂಡಗೋಡ ಕ್ಷೇತ್ರದಲ್ಲಿ ಶಾಸಕ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಣ್ಣಿಗೇರಿ ಸಭಾಭವನದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!