Friday, October 23, 2026
HomeLocal Newsಕಾಂಗ್ರೆಸ್ ಸಚಿವ ಖಾದರ್‌ಗೆ ಬಿಜೆಪಿ ಮುಖಂಡನ ‘ಬೇಷ್’!

ಕಾಂಗ್ರೆಸ್ ಸಚಿವ ಖಾದರ್‌ಗೆ ಬಿಜೆಪಿ ಮುಖಂಡನ ‘ಬೇಷ್’!

‘ಇವರನ್ನ ನೋಡಿ ಉಳಿದ ಸಚಿವರು ಕೆಲ್ಸ ಕಲೀರಿ’ ಎಂದ ರಾಮು ನಾಯ್ಕ

ಯಲ್ಲಾಪುರ: ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಅಧಿಕಾರ ವಹಿಸಿಕೊಂಡ ಅಲ್ಪಾವಧಿಯಲ್ಲೇ ಆರೋಗ್ಯ ಇಲಾಖೆಯಲ್ಲಿ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಹಲವು ಸ್ಟಾರ್ ಹೊಟೇಲ್‌ಗಳಲ್ಲಿ ಕಳಪೆ ಆಹಾರ, ಕೊಳೆತ ಮಾಂಸ, ಮೀನು, ತರಕಾರಿ, ಹಾಲು ಹಾಗೂ ಪನ್ನೀರ್ ಸೇರಿದಂತೆ ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದ ಉಲ್ಲಂಘನೆಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆಸ್ಪತ್ರೆಗಳಿಗೆ ಹಠಾತ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸುತ್ತಿರುವ ಸಚಿವರು, ಅಗತ್ಯವಿರುವ ಕಡೆ ವೈದ್ಯರು, ಸಿಬ್ಬಂದಿ ಹಾಗೂ ಅಂಬುಲೆನ್ಸ್ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಮು ನಾಯ್ಕ ತಿಳಿಸಿದ್ದಾರೆ.ನಕಲಿ ಔಷಧಿಗಳ ತಯಾರಿಕೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದ್ದು, ಕೆಲವು ಸಂಸ್ಥೆಗಳು ಹಾಗೂ ಔಷಧ ವಿತರಕ ಫಾರ್ಮಸಿಗಳನ್ನು ಸೀಲ್ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಇಂತಹ ಕ್ರಮಗಳು ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಮಹತ್ವದ್ದಾಗಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.‘ಆಡದೇ ಮಾಡುವವನು ರೂಢಿಯೊಳಗುತ್ತಮ, ಆಡಿಯೂ ಮಾಡದವನು ಅಧಮ’ ಎಂಬ ಸರ್ವಜ್ಞನ ವಚನವನ್ನು ಉಲ್ಲೇಖಿಸಿರುವ ರಾಮು ನಾಯ್ಕ, ಅಧಿಕಾರ ವಹಿಸಿಕೊಂಡ ಅಲ್ಪಾವಧಿಯಲ್ಲೇ ಕಾರ್ಯಪ್ರವೃತ್ತರಾಗಿರುವ ಆರೋಗ್ಯ ಸಚಿವರು ಈ ನುಡಿಗೆ ತಕ್ಕಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಜಮೀರ್ ಅಹ್ಮದ್ ಅವರ ವಿರುದ್ಧವೂ ಟೀಕಾ ಪ್ರಹಾರ ನಡೆಸಿರುವ ಅವರು, ತಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಗಳಿಗಿಂತ ರಾಜಕೀಯ ವಿಚಾರಗಳ ಬಗ್ಗೆ ಮಾತನಾಡುವುದಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಯು.ಟಿ. ಖಾದರ್ ಅವರ ಕಾರ್ಯವೈಖರಿಯಿಂದ ಇಂತಹ ಸಚಿವರು ಪಾಠ ಕಲಿಯಬೇಕು ಎಂದು ರಾಮು ನಾಯ್ಕ ಹೇಳಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share