Ad
Ad
Ad
Home Local News ಕಲ್ಲಂಗಡಿಯಲ್ಲಿ ಮೂಡಿದ ಶಾಸಕ ಹೆಬ್ಬಾರ್!

ಕಲ್ಲಂಗಡಿಯಲ್ಲಿ ಮೂಡಿದ ಶಾಸಕ ಹೆಬ್ಬಾರ್!

0
19

ಶಿರಸಿ: ಕಲ್ಲಂಗಡಿ ಹಣ್ಣನ್ನು ಕತ್ತರಿಸಿ ತಿನ್ನುವುದು ಸಾಮಾನ್ಯ. ಆದರೆ ಅದೇ ಕಲ್ಲಂಗಡಿ ಹಣ್ಣಿನ ಮೇಲೆ ಕಲಾಕೃತಿ ಅರಳಿಸಿದರೆ? ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿನಿ ಪೂಜಾ ಲಕ್ಷ್ಮೀಶ ನಾಯ್ಕ ಅವರು ಕಲ್ಲಂಗಡಿ ಹಣ್ಣಿನಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರ ಭಾವಚಿತ್ರವನ್ನು ರಚಿಸಿ ಗಮನ ಸೆಳೆದಿದ್ದಾರೆ.

Ad

ಪೂಜಾ ನಾಯ್ಕ ಅವರ ಈ ವಿಶಿಷ್ಟ ಕಲಾಕೃತಿಯನ್ನು ಕಂಡ ಶಾಸಕ ಶಿವರಾಮ ಹೆಬ್ಬಾರ್ ಮೆಚ್ಚುಗೆ ವ್ಯಕ್ತಪಡಿಸಿ, ಅವರ ಕಲಾ ಪ್ರತಿಭೆಯನ್ನು ಶ್ಲಾಘಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಯುರೋಪ್‌ನಲ್ಲಿ ನಡೆಯಲಿರುವ ಕ್ಯುಲಿನರಿ ಆರ್ಟ್ ವರ್ಲ್ಡ್ ಕಪ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಪೂಜಾ ನಾಯ್ಕ ಅವರಿಗೆ ಆರ್ಥಿಕ ನೆರವು ನೀಡಿ, ಸ್ಪರ್ಧೆಯಲ್ಲಿ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.

ಕ್ಯುಲಿನರಿ ಕಲೆಯಲ್ಲಿ ಈಗಾಗಲೇ ಗಮನಾರ್ಹ ಸಾಧನೆ ಮಾಡಿರುವ ಪೂಜಾ ನಾಯ್ಕ ಅವರು ತಮ್ಮ ಪ್ರತಿಭೆಯ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲೂ ಸ್ಥಾನ ಪಡೆದಿದ್ದಾರೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವ ಅವರು, ತಮ್ಮ ವಿಶಿಷ್ಟ ಕಲಾ ಪ್ರತಿಭೆಯ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯನ್ನು ಹೆಚ್ಚಿಸಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿನಿಯಾಗಿದ್ದರೂ ಅಸಾಧಾರಣ ಪ್ರತಿಭೆಯ ಮೂಲಕ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪೂಜಾ ನಾಯ್ಕ ಅವರ ಸಾಧನೆಗೆ ಶಾಸಕ ಹೆಬ್ಬಾರ್ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿ ಶುಭ ಹಾರೈಸಿದರು.

NO COMMENTS

LEAVE A REPLY

Please enter your comment!
Please enter your name here

error: Content is protected !!