Friday, October 23, 2026
HomeLocal Newsರಾಷ್ಟ್ರೀಯ ಲೋಕ ಅದಾಲತ್‌: 1.47 ಲಕ್ಷಕ್ಕೂ ಅಧಿಕ ಪ್ರಕರಣಗಳ ಇತ್ಯರ್ಥ

ರಾಷ್ಟ್ರೀಯ ಲೋಕ ಅದಾಲತ್‌: 1.47 ಲಕ್ಷಕ್ಕೂ ಅಧಿಕ ಪ್ರಕರಣಗಳ ಇತ್ಯರ್ಥ

ಕಾರವಾರ: ರಾಜೀ ಸಂಧಾನದ ಮೂಲಕ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 1,47,738 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಸಂಬಂಧಿತ ಹಣಕಾಸು ಪ್ರಕರಣಗಳಲ್ಲಿ ಒಟ್ಟು 50.88 ಕೋಟಿ ರೂ ಸಂಗ್ರಹ ಮತ್ತು ಪಾವತಿಯಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಜಿಯಾಗಬಹುದಾದ ಬಾಕಿ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿತ್ತು.

ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 46,129 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದವು. ಇವುಗಳಲ್ಲಿ 18,740 ಸಿವಿಲ್ ಹಾಗೂ 27,389 ಕ್ರಿಮಿನಲ್ ಪ್ರಕರಣಗಳಾಗಿವೆ. ಪ್ರಸ್ತುತ ಹಂತದಲ್ಲಿದ್ದ ಪ್ರಕರಣಗಳ ಪೈಕಿ 15,245 ಪ್ರಕರಣಗಳು ರಾಜಿಯಾಗಬಹುದಾದ ಪ್ರಕರಣಗಳಾಗಿದ್ದು, ಅವುಗಳಲ್ಲಿ 10,842 ಪ್ರಕರಣಗಳನ್ನು ರಾಜೀ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು.

ಇವುಗಳ ಪೈಕಿ ನ್ಯಾಯಾಲಯದಲ್ಲಿ ಬಾಕಿ ಇದ್ದ 6,041 ಪ್ರಕರಣಗಳು ಹಾಗೂ 1,41,697 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗಿದೆ. ಸಾಲ ಮರುಪಾವತಿ, ಪರಿಹಾರ, ದಂಡ ಸೇರಿದಂತೆ ವಿವಿಧ ಹಣಕಾಸು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 50,88,22,367 ರೂ ಹಣ ಸಂಗ್ರಹ ಮತ್ತು ಪಾವತಿಯಾಗಿದೆ.

ಲೋಕ ಅದಾಲತ್‌ನಲ್ಲಿ ಕೆಲವು ಕೌಟುಂಬಿಕ ಪ್ರಕರಣಗಳ ಇತ್ಯರ್ಥವೂ ವಿಶೇಷ ಗಮನ ಸೆಳೆಯಿತು. ಕಾರವಾರ, ಕುಮಟಾ, ಸಿದ್ದಾಪುರ ಹಾಗೂ ಮುಂಡಗೋಡದ ನಾಲ್ಕು ಕೌಟುಂಬಿಕ ಪ್ರಕರಣಗಳಲ್ಲಿ ದಂಪತಿಗಳು ರಾಜೀ ಸಂಧಾನದ ಮೂಲಕ ಮತ್ತೆ ಒಟ್ಟಿಗೆ ಜೀವನ ನಡೆಸಲು ಒಪ್ಪಿಕೊಂಡಿದ್ದಾರೆ. ಜೀವನಾಂಶಕ್ಕೆ ಸಂಬಂಧಿಸಿದ ಸುಮಾರು 29 ಪ್ರಕರಣಗಳೂ ರಾಜಿಯಾಗಿವೆ.

ಇದಲ್ಲದೆ, ಜಿಲ್ಲೆಯ 37 ಕುಟುಂಬದ ಆಸ್ತಿ ವಿಭಜನೆ ಪ್ರಕರಣಗಳು, 432 ಚೆಕ್ ಬೌನ್ಸ್ ಪ್ರಕರಣಗಳು ಹಾಗೂ 35 ಮೋಟಾರು ಅಪಘಾತ ಪರಿಹಾರ ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡಿವೆ.

ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ರಾಜಿಯಾಗಲು ಸಹಕರಿಸಿದ ಜಿಲ್ಲೆಯ ನ್ಯಾಯಾಧೀಶರು, ವಕೀಲರು, ಸರ್ಕಾರಿ ಅಭಿಯೋಜಕರು, ಪೊಲೀಸ್ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ, ಕಾರ್ಮಿಕ ಇಲಾಖೆ, ನಗರಸಭೆ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನ್ಯಾಯಾಲಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ, ಕಕ್ಷಿದಾರರು ಮತ್ತು ಮಾಧ್ಯಮ ಪ್ರತಿನಿಧಿಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಅಭಿನಂದನೆ ಸಲ್ಲಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share