Ad
Ad
Ad
Home Local News ಪಡಿತರಕ್ಕಾಗಿ ದೂರದ ಓಡಾಟಕ್ಕೆ ಬ್ರೇಕ್

ಪಡಿತರಕ್ಕಾಗಿ ದೂರದ ಓಡಾಟಕ್ಕೆ ಬ್ರೇಕ್

0
30
Pushkar, Rajasthan / India - November 5, 2019 : Public gather outside Indian government ration store. public distribution shop, also known as fair price shop (FPS), is a part of India's public system established by the Government of India which distributes rations at a subsidized price to the poor.

ಜಿಲ್ಲೆಯಲ್ಲಿ 59 ಹೊಸ ನ್ಯಾಯಬೆಲೆ ಅಂಗಡಿಗಳಿಗೆ ಅರ್ಜಿ ಆಹ್ವಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 12 ತಾಲೂಕುಗಳ ವ್ಯಾಪ್ತಿಯಲ್ಲಿ ಒಟ್ಟು 59 ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಸೆ.5ರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅರ್ಹರು ಅ.5ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Ad

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ರದ್ದಾಗಿರುವ ನ್ಯಾಯಬೆಲೆ ಅಂಗಡಿಗಳ ಸ್ಥಳಗಳಲ್ಲಿ ಹಾಗೂ ದೂರದ ಪ್ರದೇಶಗಳಿಗೆ ಪಡಿತರ ಪಡೆಯಲು ತೆರಳಬೇಕಾಗಿರುವುದರಿಂದ ಹೊಸ ನ್ಯಾಯಬೆಲೆ ಅಂಗಡಿಗಳ ಅಗತ್ಯವಿದೆ ಎಂಬ ಸಾರ್ವಜನಿಕರ ಮನವಿ ಮತ್ತು ತಾಲೂಕು ತಹಶೀಲ್ದಾರರು ಸಲ್ಲಿಸಿದ ಪ್ರಸ್ತಾವನೆಗಳನ್ನು ಪರಿಶೀಲಿಸಲಾಗಿದೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಯು 2026ರ ಆ.20ರಂದು ನಡೆದ ಸಭೆಯಲ್ಲಿ ಜಿಲ್ಲೆಯ 12 ತಾಲೂಕುಗಳ ವ್ಯಾಪ್ತಿಯ 59 ಪ್ರದೇಶಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ.

ಈ ಕುರಿತು ಸೆ.5ರಂದು ಅಂಕೋಲಾ ತಾಲೂಕಿನಲ್ಲಿ ನಡೆದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಅರ್ಜಿ ಆಹ್ವಾನ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.

ಕರ್ನಾಟಕ ಅಗತ್ಯ ವಸ್ತುಗಳ (ಸಾರ್ವಜನಿಕ ವಿತರಣಾ ವ್ಯವಸ್ಥೆ) ನಿಯಂತ್ರಣ ಆದೇಶ 2016 ಹಾಗೂ ತಿದ್ದುಪಡಿಗಳನ್ವಯ ಅರ್ಹ ಸಂಘ-ಸಂಸ್ಥೆಗಳು, ಸಹಕಾರ ಸಂಘಗಳು ಹಾಗೂ ಖಾಸಗಿ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವಿಕಲಚೇತನರು ಮತ್ತು ತೃತೀಯಲಿಂಗ ವ್ಯಕ್ತಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶವಿದೆ.

ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಹಶೀಲ್ದಾರ್ ಕಚೇರಿಯಿಂದ ‘ಎ’ ನಮೂನೆಯ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಅ.5ರ ಸಂಜೆ 5.30 ಗಂಟೆಯೊಳಗೆ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಸಲ್ಲಿಸಿ ಸ್ವೀಕೃತಿ ಪಡೆಯುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!