Friday, October 23, 2026
HomeLocal Newsಕಸ್ತೂರಿರಂಗನ್ ವರದಿಗೆ ʻನೋʼ ಎಂದ ಶಿವರಾಮ ಹೆಬ್ಬಾರ್

ಕಸ್ತೂರಿರಂಗನ್ ವರದಿಗೆ ʻನೋʼ ಎಂದ ಶಿವರಾಮ ಹೆಬ್ಬಾರ್

ಬೆಂಗಳೂರು: ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ನಡೆಯುತ್ತಿರುವ ವಿಶೇಷ ಕಲಾಪದಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಮಾತನಾಡಿ, ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಜನವಸತಿ ಪ್ರದೇಶಗಳ ಮೇಲೆ ಉಂಟಾಗಬಹುದಾದ ಸಮಸ್ಯೆಗಳ ಕುರಿತು ಸದನದ ಗಮನ ಸೆಳೆದರು.

ಉತ್ತರ ಕನ್ನಡ ಜಿಲ್ಲೆಯ ಜನರ ಹಿತಾಸಕ್ತಿ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ವಿರೋಧಿಸುವುದಾಗಿ ಶಿವರಾಮ ಹೆಬ್ಬಾರ್ ಸ್ಪಷ್ಟಪಡಿಸಿದರು. ವರದಿ ಜಾರಿಯಿಂದ ಜಿಲ್ಲೆಯ ಜನವಸತಿ ಪ್ರದೇಶಗಳು ಹಾಗೂ ಅಭಿವೃದ್ಧಿ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳ ಬಗ್ಗೆ ಅವರು ಸದನದಲ್ಲಿ ಪ್ರಸ್ತಾಪಿಸಿದರು.

ಇದೇ ಸಂದರ್ಭದಲ್ಲಿ, ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಹೊರಡಿಸಿರುವ ಸರ್ಕಾರಿ ಭೂಮಿಯಲ್ಲಿರುವ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ಕುರಿತ ಆದೇಶವನ್ನು ಹಿಂಪಡೆಯಬೇಕು ಎಂದು ಅವರು ಸರ್ಕಾರವನ್ನು ಆಗ್ರಹಿಸಿದರು.

ಈ ಆದೇಶದಿಂದ ಗ್ರಾಮೀಣ ಪ್ರದೇಶದ ಜನರಿಗೆ ಉಂಟಾಗಬಹುದಾದ ತೊಂದರೆಗಳನ್ನು ಪರಿಗಣಿಸಿ, ಜನಪರ ನಿರ್ಧಾರ ಕೈಗೊಳ್ಳಬೇಕು ಎಂದು ಶಿವರಾಮ ಹೆಬ್ಬಾರ್ ಒತ್ತಾಯಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share