Friday, October 23, 2026
HomeCrimeಅಳತೆ ಮೀರಿದ ಧ್ವನಿವರ್ಧಕದ ಸದ್ದು: ಕುಮಟಾದಲ್ಲಿ ಪ್ರಕರಣ

ಅಳತೆ ಮೀರಿದ ಧ್ವನಿವರ್ಧಕದ ಸದ್ದು: ಕುಮಟಾದಲ್ಲಿ ಪ್ರಕರಣ

ಕುಮಟಾ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಧ್ವನಿವರ್ಧಕ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕುಮಟಾ ನೆಲ್ಲಿಕೇರಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.21ರಂದು ರಾತ್ರಿ 10.30ರ ಸುಮಾರಿಗೆ ಕುಮಟಾ ನಗರದ ಬಸ್ತಿಪೇಟೆಯ ಜನವಸತಿ ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ 91 ಡೆಸಿಬಲ್‌ಗಿಂತ ಹೆಚ್ಚಿನ ಪ್ರಮಾಣದಲ್ಲಿ ಧ್ವನಿವರ್ಧಕ ಬಳಸಲಾಗಿದೆ ಹಾಗೂ ಧ್ವನಿವರ್ಧಕ ಪರವಾನಗಿಯ ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರದ ಕ್ಷೇತ್ರ ಸಹಾಯಕ ಹಾಗೂ ನೆಲ್ಲಿಕೇರಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಥಮೇಶ ಕೃಷ್ಣ ಮೇತ್ರಿ ಅವರು ಸೆ.22ರಂದು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಕುರಿತು ಠಾಣೆಯಲ್ಲಿ ಎನ್.ಸಿ ದಾಖಲಿಸಲಾಗಿತ್ತು.

ನಂತರ ಸೆ.23ರಂದು ಮಾನ್ಯ ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಬಂದ ಹಿನ್ನೆಲೆಯಲ್ಲಿ ಠಾಣಾ ಪ್ರಕರಣವಾಗಿ ದಾಖಲಿಸಿಕೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share