ಹಳಿಯಾಳ: ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಳಿಯಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.25ರಂದು ಬೆಳಗ್ಗೆ 6 ಗಂಟೆಯಿಂದ ಸೆ.26ರ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.
ಈ ಅವಧಿಯಲ್ಲಿ ಮದ್ಯದ ಅಂಗಡಿಗಳು, ವೈನ್ ಶಾಪ್ಗಳು ಹಾಗೂ ಬಾರ್ಗಳನ್ನು ಬಂದ್ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.


