Thursday, October 22, 2026
HomeCrimeಧಾರ್ಮಿಕ ಭಾವನೆ ಕೆರಳಿಸುವ ಹೇಳಿಕೆ ಆರೋಪ: ಬಿಣಗಾ ವ್ಯಕ್ತಿಯ ವಿರುದ್ಧ ದೂರು

ಧಾರ್ಮಿಕ ಭಾವನೆ ಕೆರಳಿಸುವ ಹೇಳಿಕೆ ಆರೋಪ: ಬಿಣಗಾ ವ್ಯಕ್ತಿಯ ವಿರುದ್ಧ ದೂರು

ಕಾರವಾರ: ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಧರ್ಮ ಹಾಗೂ ಧಾರ್ಮಿಕ ಭಾವನೆಗಳಿಗೆ ಅವಮಾನವಾಗುವ ರೀತಿಯಲ್ಲಿ ಮಾತನಾಡಿ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಉಂಟುಮಾಡುವಂತಹ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಬಿಣಗಾ ಗ್ರಾಮದ ಜಾಕೀರ್ ಹುಸೇನ್ ಗುಡಿಮಿಯಾ ಎಂಬವರ ವಿರುದ್ಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಉಲ್ಲಾಸ ತೋಕು ನಾಯ್ಕ ಅವರು ಸೆ.22ರಂದು ನೀಡಿದ ದೂರಿನ ಪ್ರಕಾರ, ಸಂಜೆ 6 ಗಂಟೆ ಸುಮಾರಿಗೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಪರಿಶೀಲಿಸುತ್ತಿದ್ದಾಗ ಅಮನ್ ನಾಯ್ಕ ಎಂಬಾತ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಂಜೆ 4.30ರ ಸುಮಾರಿಗೆ ವಿಡಿಯೋವೊಂದನ್ನು ಟ್ಯಾಗ್ ಮಾಡಿರುವುದು ಕಂಡುಬಂದಿದೆ.

ವಿಡಿಯೋವನ್ನು ವೀಕ್ಷಿಸಿದಾಗ ಜಾಕೀರ್ ಹುಸೇನ್ ಗುಡಿಮಿಯಾ ಹಾಗೂ ಮತ್ತೊಬ್ಬ ವ್ಯಕ್ತಿ ಕೊಂಕಣಿ ಭಾಷೆಯಲ್ಲಿ ಮಾತನಾಡುತ್ತಿದ್ದು, ಹಿಂದೂ ಧರ್ಮ, ಧಾರ್ಮಿಕ ನಂಬಿಕೆಗಳು ಹಾಗೂ ವಿವಿಧ ಸಂಘಟನೆಗಳನ್ನು ಅವಹೇಳನ ಮಾಡುವ ರೀತಿಯಲ್ಲಿ ಆಕ್ಷೇಪಾರ್ಹ ಪದಗಳನ್ನು ಬಳಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ವಿಡಿಯೋದಲ್ಲಿ ಹಿಂದೂ ಧರ್ಮದವರನ್ನು ಉದ್ದೇಶಿಸಿ ಅತ್ಯಂತ ಅಶ್ಲೀಲ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿರುವುದಲ್ಲದೆ, ಬಜರಂಗ ದಳ ಸೇರಿದಂತೆ ವಿವಿಧ ಸಂಘಟನೆಗಳನ್ನು ಉಲ್ಲೇಖಿಸಿ ನಿಂದನಾತ್ಮಕವಾಗಿ ಮಾತನಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಹಾಗೂ ವಿವಿಧ ಹಿಂದೂ, ಮುಸ್ಲಿಂ ಸಂಘಟನೆಗಳ ನಡುವೆ ವೈರತ್ವ, ದ್ವೇಷ ಅಥವಾ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

ವಿಡಿಯೋದಲ್ಲಿನ ಹೇಳಿಕೆಗಳ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾರವಾರ ಗ್ರಾಮೀಣ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share