Friday, October 23, 2026
HomeLocal Newsʻಪ್ರಜಾಸೇವೆʼಯಲ್ಲಿ ಅಕ್ರಮ ಮರಳು ಸಾಗಾಟದ ಪುಕಾರು

ʻಪ್ರಜಾಸೇವೆʼಯಲ್ಲಿ ಅಕ್ರಮ ಮರಳು ಸಾಗಾಟದ ಪುಕಾರು

ಕಾರವಾರ: ಕಿನ್ನರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗದ್ದೆಗಳಿಗೆ ಉಪ್ಪುನೀರು ನುಗ್ಗುತ್ತಿರುವುದು ಹಾಗೂ ಬಾವಿಗಳಲ್ಲಿ ಉಪ್ಪುನೀರು ಸೇರುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.

ಶನಿವಾರ ಕಾರವಾರ ತಾಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಿನ್ನರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗದ್ದೆಗಳಿಗೆ ಉಪ್ಪುನೀರು ನುಗ್ಗುತ್ತಿರುವುದು ಹಾಗೂ ಬಾವಿಗಳಲ್ಲಿ ಉಪ್ಪುನೀರು ಸೇರುತ್ತಿರುವ ಕುರಿತು ಗ್ರಾಮಸ್ಥರು ಸಲ್ಲಿಸಿದ ಮನವಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಉಪ್ಪುನೀರಿನ ಸಮಸ್ಯೆ ತಡೆಗಟ್ಟಲು ಸಣ್ಣ ನೀರಾವರಿ ಇಲಾಖೆಯಿಂದ ಈ ಭಾಗದಲ್ಲಿ ಖಾರ್ಲ್ಯಾಂಡ್ ನಿರ್ಮಾಣ ಮಾಡುವ ಕುರಿತು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಆದಷ್ಟು ಶೀಘ್ರದಲ್ಲಿ ಸಮಸ್ಯೆಗೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಈ ಭಾಗದ ಕುಡಿಯುವ ನೀರಿನ ಸಮಸ್ಯೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಶಾಶ್ವತ ಪರಿಹಾರ ಒದಗಿಸಲಾಗುವುದು. ಯೋಜನೆ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಇದೇ ವೇಳೆ ಕಾಳಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಕುರಿತು ಗ್ರಾಮಸ್ಥರು ನೀಡಿದ ದೂರಿನ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಗಣಿಗಾರಿಕೆ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಮೂಲಕ ಈ ಭಾಗದಲ್ಲಿ ಚೆಕ್‌ಪೋಸ್ಟ್ ಆರಂಭಿಸಿ ಅಕ್ರಮ ಮರಳು ಸಾಗಾಟ ತಡೆಯುವುದಾಗಿ ಅಧಿಕಾರಿಗಳು ತಿಳಿಸಿದರು.

ಹೆಸ್ಕಾಂ ಇಲಾಖೆಗೆ ಸಂಬಂಧಿಸಿದ ವಿದ್ಯುತ್ ಲೈನ್‌ಗಳ ದುರಸ್ತಿ ಹಾಗೂ ವಿದ್ಯುತ್ ಕಂಬಗಳ ಸ್ಥಳಾಂತರ ಮತ್ತು ಅರಣ್ಯ ಇಲಾಖೆಗೆ ಸಂಬಂಧಿಸಿದ ಅಪಾಯಕಾರಿಯಾದ ಮರಗಳ ತೆರವು ಕುರಿತು ಸಲ್ಲಿಕೆಯಾಗಿರುವ ದೂರುಗಳನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀಡಾಡಿ ದನಗಳ ನಿಯಂತ್ರಣ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು 40ಕ್ಕೂ ಅಧಿಕ ದೂರುಗಳು ಸಲ್ಲಿಕೆಯಾಗಿದ್ದು, ಎಲ್ಲ ದೂರುಗಳಿಗೂ ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಕಾರವಾರ ಉಪವಿಭಾಗಾಧಿಕಾರಿ ರಮ್ಯಾ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೀರನಗೌಡ ಏನಗೌಡರ, ಡಿವೈಎಸ್ಪಿ ಗಿರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share