Friday, October 23, 2026
HomeLocal Newsಯಲ್ಲಾಪುರ | ಕಾಫಿ ಬೆಳೆ ಕುರಿತು ಮಾಹಿತಿ ಕಾರ್ಯಾಗಾರ ಸೆ. 30ಕ್ಕೆ

ಯಲ್ಲಾಪುರ | ಕಾಫಿ ಬೆಳೆ ಕುರಿತು ಮಾಹಿತಿ ಕಾರ್ಯಾಗಾರ ಸೆ. 30ಕ್ಕೆ

ಯಲ್ಲಾಪುರ: ಯಲ್ಲಾಪುರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘ ನಿಯಮಿತ (ಎಲ್‌ಎಸ್‌ಎಂಪಿ) ವತಿಯಿಂದ ಸಂಘದ ಸದಸ್ಯರನ್ನು ಕಾಫಿ ಬೆಳೆ ಬೆಳೆಯಲು ಉತ್ತೇಜಿಸುವ ಉದ್ದೇಶದಿಂದ ಸೆ.30ರಂದು ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ.

ಸೆ.30ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಯಲ್ಲಾಪುರದ ಎಲ್‌ಎಸ್‌ಎಂಪಿ ಸಭಾವನದಲ್ಲಿ ಕಾರ್ಯಾಗಾರ ನಡೆಯಲಿದ್ದು, ಸಂಘದ ಎಲ್ಲ ಸದಸ್ಯರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ.

ಎಲ್‌ಎಸ್‌ಎಂಪಿ ಅಧ್ಯಕ್ಷ ನಾಗರಾಜ ನಾ. ಕವಡಿಕೇರಿ ಅವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಲ್ಲಾಪುರ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾ ನಿರ್ದೇಶಕ ಸತೀಶ ಹೆಗಡೆ ಹಾಗೂ ಶಿರಸಿ ತೋಟಗಾರಿಕಾ ಇಲಾಖೆಯ ಸುಭಾಷ್ ಹೆಗಡೆ ಉಪಸ್ಥಿತರಿರಲಿದ್ದಾರೆ.

ಶಿರಸಿಯ ಜಿಲ್ಲಾ ಪಂಚಾಯಿತಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಗಣೇಶ ಹೆಗಡೆ ಅವರು ಕಾಫಿ ಬೆಳೆಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ನೀಡಲಿದ್ದಾರೆ.

ಎಲ್‌ಎಸ್‌ಎಂಪಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಿಬ್ಬಂದಿಗಳು ಸದಸ್ಯ ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕಾರ್ಯಾಗಾರ ಮುಗಿದ ಬಳಿಕ ಸದಸ್ಯರಿಗೆ ಕಾಫಿ ಗಿಡಗಳನ್ನು ವಿತರಿಸಲಾಗುವುದು ಎಂದು ಸಂಘದ ಪ್ರಕಟಣೆ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share