Thursday, October 22, 2026
HomeLocal Newsಶಿರಸಿ | ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಶಕ್ಕೆ

ಶಿರಸಿ | ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಶಕ್ಕೆ

ಶಿರಸಿ: ರೈತರ ಬೃಹತ್ ಪ್ರತಿಭಟನೆ ಹಾಗೂ ಸುದ್ದಿಗೋಷ್ಠಿಗೆ ಸಿದ್ಧತೆ ನಡೆದಿದ್ದ ಸಂದರ್ಭದಲ್ಲೇ ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಸೋಮವಾರ ಬೆಳಗ್ಗೆ ಶಿರಸಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಶಿರಸಿಯ ಪತ್ರಿಕಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಹಾಗೂ 11.30ಕ್ಕೆ ದಾಸನಕೊಪ್ಪದಲ್ಲಿ ರೈತರ ಬೃಹತ್ ಪ್ರತಿಭಟನೆ ನಡೆಸಲು ರೈತ ಸಂಘದ ವತಿಯಿಂದ ಕಾರ್ಯಕ್ರಮ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಶಿರಸಿಗೆ ಆಗಮಿಸಿದ್ದರು.

ಆದರೆ ಕಾರ್ಯಕ್ರಮಕ್ಕೂ ಮುನ್ನವೇ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 2013ರಲ್ಲಿ ನಡೆದ ಮಹದಾಯಿ ಹೋರಾಟಕ್ಕೆ ಸಂಬಂಧಿಸಿದ ಪ್ರಕರಣವೊಂದರ ನ್ಯಾಯಾಲಯದ ವಾರೆಂಟ್ ಆಧರಿಸಿ ಬಂಧನ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಶಿರಸಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದು, ಬಳಿಕ ಹೆಚ್ಚಿನ ವಿಚಾರಣೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಹುಬ್ಬಳ್ಳಿಗೆ ಕರೆದೊಯ್ದಿದ್ದಾರೆ.ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ನಡೆದ ಹೋರಾಟದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಾರೆಂಟ್ ಜಾರಿಯಾಗಿತ್ತು.

ಅದರ ಆಧಾರದ ಮೇಲೆ ಬಂಧನ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ರೈತ ಮುಖಂಡರ ಬಂಧನದ ಹಿನ್ನೆಲೆಯಲ್ಲಿ ದಾಸನಕೊಪ್ಪದಲ್ಲಿ ನಿಗದಿಯಾಗಿದ್ದ ರೈತರ ಪ್ರತಿಭಟನೆ ಹಾಗೂ ಮುಂದಿನ ಬೆಳವಣಿಗೆಗಳ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share