Thursday, October 22, 2026
HomeLocal Newsಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಬೀಗ; ಸ್ಥಳೀಯರಿಂದ ಆಕ್ಷೇಪ

ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಬೀಗ; ಸ್ಥಳೀಯರಿಂದ ಆಕ್ಷೇಪ

ಯಲ್ಲಾಪುರ: ಪಟ್ಟಣದ ಮುಂಡಗೋಡ ರಸ್ತೆ ರವೀಂದ್ರ ನಗರದಲ್ಲಿ ಕಳೆದ 5–6 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಬಂದ್ ಮಾಡಬಾರದು ಎಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ಸೇರಿದಂತೆ ರವೀಂದ್ರ ನಗರ ಹಾಗೂ ವಡ್ಡರ ಕಾಲನಿ ನಿವಾಸಿಗಳು ಆಗ್ರಹಿಸಿದ್ದಾರೆ.

ಈ ಕುರಿತು ಯಲ್ಲಾಪುರ ತಹಶೀಲ್ದಾರರ ಮೂಲಕ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿರುವ ನಿವಾಸಿಗಳು, ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಿಂದ ಸ್ಥಳೀಯರಿಗೆ ಹಲವು ಆರೋಗ್ಯ ಸೇವೆಗಳು ಸುಲಭವಾಗಿ ಲಭ್ಯವಾಗುತ್ತಿವೆ ಎಂದು ತಿಳಿಸಿದ್ದಾರೆ.

ರವೀಂದ್ರ ನಗರ ಹಾಗೂ ಸುತ್ತಮುತ್ತಲಿನ ನಿವಾಸಿಗಳು ಯೋಜನೆಯಡಿ ದೊರೆಯುವ ಸೌಲಭ್ಯಗಳನ್ನು ಪಡೆಯಲು ಈ ಕೇಂದ್ರವನ್ನು ಅವಲಂಬಿಸಿದ್ದಾರೆ. ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುವ ಉದ್ದೇಶ ಹೊಂದಿರುವ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರವನ್ನು ಇದೀಗ ಬಂದ್ ಮಾಡಲು ಮುಂದಾಗಿರುವುದು ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕೇಂದ್ರವನ್ನು ಮುಚ್ಚಿದರೆ ಈ ಭಾಗದ ನಿವಾಸಿಗಳು ಇದುವರೆಗೆ ಪಡೆಯುತ್ತಿದ್ದ ಆರೋಗ್ಯ ಸೌಲಭ್ಯಗಳಿಂದ ವಂಚಿತರಾಗುವ ಸಾಧ್ಯತೆ ಇದೆ. ಅಲ್ಲದೆ, ಯೋಜನೆಯ ಉದ್ದೇಶಕ್ಕೂ ಇದರಿಂದ ತೊಡಕು ಉಂಟಾಗಲಿದೆ ಎಂದು ನಿವಾಸಿಗಳು ಹೇಳಿದ್ದಾರೆ.

ಹೀಗಾಗಿ ರವೀಂದ್ರ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಬಂದ್ ಮಾಡದೆ, ಎಂದಿನಂತೆ ಮುಂದುವರಿಸಿ ಸ್ಥಳೀಯರಿಗೆ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share