ಕುಮಟಾ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ 11 ಕೆ.ವಿ. ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಡೆಯಲಿರುವುದರಿಂದ ಸೆ.30ರಂದು ಕುಮಟಾದ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೆಸ್ಕಾಂ ಕುಮಟಾ ಉಪವಿಭಾಗದ ನಗರ ಶಾಖೆಯ 11 ಕೆ.ವಿ. ಕುಮಟಾ ಟೌನ್ ಹಾಗೂ ಗ್ರಾಮೀಣ ಶಾಖೆಯ 11 ಕೆ.ವಿ. ಧಾರೇಶ್ವರ ಮಾರ್ಗದಲ್ಲಿ ಈ ಕಾಮಗಾರಿ ನಡೆಯಲಿದೆ. ಹೀಗಾಗಿ ಸೆ.30ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕುಮಟಾ ಟೌನ್ ಹಾಗೂ ಧಾರೇಶ್ವರ ಮಾರ್ಗದ ಎಲ್ಲಾ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಹಿನ್ನೆಲೆಯಲ್ಲಿ ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ಕುಮಟಾ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
