Friday, October 23, 2026
HomeLocal Newsಬಡತನದ ಕಾರಣಕ್ಕೆ ಯಾರೂ ಕಣ್ಣಿನ ಚಿಕಿತ್ಸೆಯಿಂದ ವಂಚಿತರಾಗಬಾರದು

ಬಡತನದ ಕಾರಣಕ್ಕೆ ಯಾರೂ ಕಣ್ಣಿನ ಚಿಕಿತ್ಸೆಯಿಂದ ವಂಚಿತರಾಗಬಾರದು

ಶಿರಸಿ: ಹಣಕಾಸಿನ ಕೊರತೆಯಿಂದ ಯಾರೂ ಸೂಕ್ತ ಕಣ್ಣಿನ ಚಿಕಿತ್ಸೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ದಿವಂಗತ ಗಣಪತಿ ಟಿ. ನಾಯ್ಕ ಮಳಲಗಾಂವ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ, ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಶಿರಸಿಯ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ದಿವಂಗತ ಗಣಪತಿ ಟಿ. ನಾಯ್ಕ ಮಳಲಗಾಂವ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಎಂ. ಜೋಶಿ ಗಣೇಶ ನೇತ್ರಾಲಯದ ಸಹಯೋಗದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ದಿವಂಗತ ಗಣಪತಿ ಟಿ. ನಾಯ್ಕ ಮಳಲಗಾಂವ್ ಅವರ ಸ್ಮರಣೆಯಲ್ಲಿ ಟ್ರಸ್ಟ್ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಪ್ರತಿಯೊಬ್ಬರಿಗೂ ಕಣ್ಣಿನ ಆರೋಗ್ಯ ಮುಖ್ಯವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇಂತಹ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿಯೂ ಹಲವು ಸಮಾಜಸೇವಾ ಕಾರ್ಯಕ್ರಮಗಳನ್ನು ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ಭೀಮಣ್ಣ ನಾಯ್ಕ ಹೇಳಿದರು.

ಶಿಬಿರದಲ್ಲಿ ಎಂ.ಎಂ. ಜೋಶಿ ಗಣೇಶ ನೇತ್ರಾಲಯದ ಸಿಬ್ಬಂದಿ ತಂಡವು ನೂರಾರು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಕಣ್ಣುಗಳನ್ನು ಉಚಿತವಾಗಿ ತಪಾಸಣೆ ನಡೆಸಿತು. ಅಗತ್ಯವಿದ್ದವರಿಗೆ ಸೂಕ್ತ ಸಲಹೆ ನೀಡುವುದರ ಜೊತೆಗೆ ಮುಂದಿನ ಚಿಕಿತ್ಸೆಗೆ ಮಾರ್ಗದರ್ಶನ ನೀಡಲಾಯಿತು.

ಶಿಬಿರದ ಯಶಸ್ಸನ್ನು ವೀಕ್ಷಿಸಿದ ಟ್ರಸ್ಟ್ ಕಾರ್ಯದರ್ಶಿ ಅಶ್ವಿನ್ ಭೀಮಣ್ಣ ನಾಯ್ಕ ಅವರು ಶಿಬಿರಾರ್ಥಿಗಳನ್ನು ಭೇಟಿ ಮಾಡಿ ಆರೋಗ್ಯದ ಕುರಿತು ವಿಚಾರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು ಹಾಗೂ ಎಂ.ಎಂ. ಜೋಶಿ ಗಣೇಶ ನೇತ್ರಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share