Friday, October 23, 2026
HomeLocal Newsಅಕ್ರಮ ವಿದ್ಯುತ್ ಸಂಪರ್ಕ: ಕ್ರಮಕ್ಕೆ ಸ್ಟೀಲ್ ಫ್ಯಾಬ್ರಿಕೇಶನ್ ಉದ್ಯಮಿಗಳ ಆಗ್ರಹ

ಅಕ್ರಮ ವಿದ್ಯುತ್ ಸಂಪರ್ಕ: ಕ್ರಮಕ್ಕೆ ಸ್ಟೀಲ್ ಫ್ಯಾಬ್ರಿಕೇಶನ್ ಉದ್ಯಮಿಗಳ ಆಗ್ರಹ

ಬನವಾಸಿ: ಜಿಲ್ಲಾ ಕೈಗಾರಿಕಾ ಕೇಂದ್ರದ ಪರವಾನಗಿ ಪಡೆಯದೆ ಹಾಗೂ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ವೆಲ್ಡಿಂಗ್ ಮತ್ತು ಸ್ಟೀಲ್ ಫ್ಯಾಬ್ರಿಕೇಶನ್ ಕಾಮಗಾರಿ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿರಸಿ ತಾಲ್ಲೂಕು ಸ್ಟೀಲ್ ಫ್ಯಾಬ್ರಿಕೇಶನ್ ಇಂಡಸ್ಟ್ರೀಸ್ ಅಸೋಸಿಯೇಷನ್‌ (ರಿ.) ಬನವಾಸಿ ಘಟಕದ ಸದಸ್ಯರು ಬುಧವಾರ ಹೆಸ್ಕಾಂ ಶಾಖಾಧಿಕಾರಿ ಯಾದವ್ ಬೋರಕರ್ ಅವರಿಗೆ ಮನವಿ ಸಲ್ಲಿಸಿದರು.

ವೆಲ್ಡಿಂಗ್ ಹಾಗೂ ಸ್ಟೀಲ್ ಫ್ಯಾಬ್ರಿಕೇಶನ್ ಉದ್ಯಮ ನಡೆಸುವವರು ನಿಯಮಾನುಸಾರ ಜಿಲ್ಲಾ ಕೈಗಾರಿಕಾ ಕೇಂದ್ರದ ಪರವಾನಗಿ ಪಡೆದು ವಿದ್ಯುತ್ ಸಂಪರ್ಕ ಹೊಂದಿ, ವಿದ್ಯುತ್ ಶುಲ್ಕ ಪಾವತಿಸುತ್ತಿದ್ದಾರೆ. ಆದರೆ ಕೆಲವರು ಯಾವುದೇ ಪರವಾನಗಿ ಇಲ್ಲದೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ತೆರಳಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಕಾಮಗಾರಿ ನಡೆಸುತ್ತಿದ್ದಾರೆ.

ಇದರಿಂದ ನಿಯಮಾನುಸಾರ ಉದ್ಯಮ ನಡೆಸುತ್ತಿರುವವರಿಗೆ ಅನ್ಯಾಯವಾಗುತ್ತಿದೆ ಎಂದು ಅಸೋಸಿಯೇಷನ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ಅಕ್ರಮ ವಿದ್ಯುತ್ ಬಳಕೆಯಿಂದ ಹೆಸ್ಕಾಂ ಇಲಾಖೆಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆಯಿದ್ದು, ವಿದ್ಯುತ್ ಅವಘಡಗಳಿಗೂ ಕಾರಣವಾಗಬಹುದು. ಹೀಗಾಗಿ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ಅಕ್ರಮ ವಿದ್ಯುತ್ ಸಂಪರ್ಕಗಳನ್ನು ಪತ್ತೆಹಚ್ಚಿ, ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಕುರಿತು ಬನವಾಸಿ ಪಿಎಸ್‌ಐ ಮಹಾಂತಪ್ಪ ಕುಂಬಾರ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಘವೇಂದ್ರ ಅವರಿಗೂ ಅಸೋಸಿಯೇಷನ್ ಸದಸ್ಯರು ಮನವಿ ಸಲ್ಲಿಸಿದರು.

ಅಸೋಸಿಯೇಷನ್ ಬನವಾಸಿ ಘಟಕದ ಅಧ್ಯಕ್ಷ ಗಣಪತಿ ಮಡಿವಾಳ, ಉಪಾಧ್ಯಕ್ಷ ಪರಮೇಶ್ವರ ಮಡಿವಾಳ, ಕಾರ್ಯದರ್ಶಿ ಅಣ್ಣಪ್ಪ ನಾಯ್ಕ್, ಖಜಾಂಚಿ ಸಂತೋಷ ನಾಯ್ಕ್, ಸದಸ್ಯರಾದ ಶಿವರಾಜ್ ಆಚಾರ್ಯ, ಅಶ್ವಿನಿ ನಾಯ್ಕ್, ಸುಭಾಷ್ ಆರ್.ಎಂ., ರವಿ ಕುರುಬರ, ಉದಯರವಿ ನಾಯ್ಕ್, ಶ್ರೀನಿವಾಸ, ದಿನೇಶ, ಗಣೇಶ ನಾಯ್ಕ್, ಸಂಜೀವ್ ನಾಯ್ಕ್, ಶಿವರಾಜ ಚನ್ನಯ್ಯ, ಮಂಜುನಾಥ ಕುರುಬರ ಹಾಗೂ ವಿಶ್ವನಾಥ ಬಡಿಗೇರ ಉಪಸ್ಥಿತರಿದ್ದರು.

  • ವರದಿ: ಸುಧೀರ್ ನಾಯರ್, ಬನವಾಸಿ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share