Thursday, October 22, 2026
HomeCrimeಚೆಕ್ ಬೌನ್ಸ್ ಪ್ರಕರಣ: ಶಿರಸಿಯ ಆರೋಪಿ ವಶಕ್ಕೆ

ಚೆಕ್ ಬೌನ್ಸ್ ಪ್ರಕರಣ: ಶಿರಸಿಯ ಆರೋಪಿ ವಶಕ್ಕೆ

ಶಿರಸಿ: ಸಾಲ ಪಡೆದು ಮರುಪಾವತಿಸದ ಹಾಗೂ ಸಾಲ ತೀರಿಸಲು ನೀಡಿದ್ದ ಚೆಕ್ ಅಮಾನ್ಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿಯ ರವೀಶ ವೆಂಕಟ್ರಮಣ ಹೆಗಡೆ ಎಂಬುವರನ್ನು ಭಟ್ಕಳ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಭಟ್ಕಳದ ಈಶ್ವರ ಹೊನ್ನಪ್ಪ ನಾಯ್ಕ ಅವರಿಂದ ರವೀಶ ಹೆಗಡೆ ಅವರು ಕೈಗಡ ಸಾಲ ಪಡೆದಿದ್ದರು ಎನ್ನಲಾಗಿದ್ದು, ಸಾಲ ಮರುಪಾವತಿಗಾಗಿ ಚೆಕ್ ನೀಡಿದ್ದರು. ಆ ಚೆಕ್‌ ಅನ್ನು ಬ್ಯಾಂಕಿಗೆ ಹಾಕಿದಾಗ, ಅವರ ಖಾತೆಯಲ್ಲಿ ಸಮರ್ಪಕ ಹಣವಿಲ್ಲದೇ ಚೆಕ್‌ ಅಮಾನ್ಯಗೊಂಡಿತ್ತು. ಬಳಿಕ ಸಾಲದ ಮೊತ್ತವನ್ನು ಪಾವತಿಸುವಂತೆ ಸೂಚಿಸಿದರೂ ರವೀಶ ಹೆಗಡೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಈಶ್ವರ ನಾಯ್ಕ ಅವರು ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆದರೆ ರವೀಶ ಹೆಗಡೆ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಭಟ್ಕಳ ಪೊಲೀಸರು ಶಿರಸಿಯಲ್ಲಿರುವ ಅವರ ನಿವಾಸಕ್ಕೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ರವೀಶ ಹೆಗಡೆ ಶಿರಸಿಯ ಮನೆಯಲ್ಲಿದ್ದ ಸಂದರ್ಭದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯೊಬ್ಬರ ಆತ್ಮಹತ್ಯೆ ಪ್ರಕರಣ ಹಾಗೂ ಕೆಡಿಸಿಸಿ ಕಾರು ಸಾಲ ಹಗರಣ ಸೇರಿದಂತೆ ಇನ್ನೂ ಕೆಲವು ಪ್ರಕರಣಗಳಲ್ಲಿಯೂ ರವೀಶ ಹೆಗಡೆ ಆರೋಪಿಯಾಗಿದ್ದಾರೆ ಎಂದು ತಿಳಿದುಬಂದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share