Thursday, October 22, 2026
HomeLocal Newsಕಾಳಿನದಿ ಸಂಗಮದಲ್ಲಿ ಸಿಕ್ಕಿದ್ದು ಇಷ್ಟೇ ತ್ಯಾಜ್ಯ!

ಕಾಳಿನದಿ ಸಂಗಮದಲ್ಲಿ ಸಿಕ್ಕಿದ್ದು ಇಷ್ಟೇ ತ್ಯಾಜ್ಯ!

ಕಾರವಾರ: ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಕಾರವಾರದ ಕಾಳಿ ನದಿ ಸಂಗಮ ಪ್ರದೇಶದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನಡೆಸಿ, ಕಡಲತೀರದಲ್ಲಿ ಸಂಗ್ರಹವಾಗಿದ್ದ ಬರೋಬ್ಬರಿ 1825 ಕೆ.ಜಿ. ಘನತ್ಯಾಜ್ಯವನ್ನು ತೆರವುಗೊಳಿಸಲಾಯಿತು.

ಪ್ಲಾಸ್ಟಿಕ್, ಗಾಜಿನ ಬಾಟಲಿಗಳು, ಮೀನುಗಾರಿಕಾ ಬಲೆಗಳು, ಡೈಪರ್, ನ್ಯಾಪ್ಕಿನ್, ರಬ್ಬರ್ ಸೇರಿದಂತೆ ವಿವಿಧ ರೀತಿಯ ತ್ಯಾಜ್ಯಗಳನ್ನು ಅಭಿಯಾನದ ವೇಳೆ ಸಂಗ್ರಹಿಸಿ ಕಡಲತೀರವನ್ನು ಸ್ವಚ್ಛಗೊಳಿಸಲಾಯಿತು.

ಅರಣ್ಯ ಇಲಾಖೆಯ ಸುಮಾರು 150 ಸಿಬ್ಬಂದಿ, ರೋಟರಿ ಕ್ಲಬ್‌ನ 40 ಸದಸ್ಯರು ಹಾಗೂ ಅಗ್ನಿವೀರ ತರಬೇತಿಯ 40 ಪ್ರಶಿಕ್ಷಣಾರ್ಥಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು ಕೈಜೋಡಿಸಿದರು. ಅಭಿಯಾನದ ಬಳಿಕ ಜಿಲ್ಲಾಧಿಕಾರಿ ಕಚೇರಿಯಿಂದ ಜಾಥಾ ನಡೆಸಿ, ‘ವನಸಿರಿ’ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ, ಸಾಮಾಜಿಕ ಅರಣ್ಯ ವಿಭಾಗದ ಡಿಎಫ್‌ಒ ಮಂಜುನಾಥ ನಾವಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಡಿ. ನಾಯಕ್, ಕರಾವಳಿ ಮತ್ತು ಸಾಗರ ಜೀವಿಗಳ ಸಂರಕ್ಷಣೆ (Coastal and Marine) ವಲಯದ ವಲಯ ಅರಣ್ಯಾಧಿಕಾರಿ ಗಜಾನನ ಎಸ್. ನಾಯಕ್‌, ರೋಟರಿ ಕ್ಲಬ್ ಅಧ್ಯಕ್ಷ ಡೊಲ್ರಿಚ್, ಕಾರವಾರ ವಲಯ ಅರಣ್ಯಾಧಿಕಾರಿ ಕಿರಣ್ ಮಾನವಚಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share