ಯಲ್ಲಾಪುರ: 2025–26ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಪ್ರಶಸ್ತಿಗೆ ಭಾಜನವಾಗಿರುವ ಭರತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಕ್ಷದ ಕುಂದರಗಿ ಮಂಡಳ ಹಾಗೂ ಯುವ ಉದ್ಯಮಿ ಬಾಲಕೃಷ್ಣ ನಾಯಕ್ ಅವರ ವತಿಯಿಂದ ಶಾಲೆಯ ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಶಿಕ್ಷಕರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಮನಾಥ ಡೆವಲಪರ್ಸ್‌ನ ಬಾಲಕೃಷ್ಣ ನಾಯಕ್ ಅವರು ತಮ್ಮ ಟ್ರಸ್ಟ್ ವತಿಯಿಂದ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್‌ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ನಟರಾಜ್ ಗೌಡರ್, ಗಣೇಶ ಹೆಗಡೆ, ಎಸ್‌ಡಿಎಂಸಿ ಅಧ್ಯಕ್ಷ ಶಶಿಕಾಂತ ಹೆಗಡೆ, ರಾಮಕೃಷ್ಣ ಹೆಗಡೆ, ನಾರಾಯಣ ಖಂಡೇಕರ್, ಸೀತಾರಾಮ ಗೌಡ, ರಾಘು ಕುಂದರಗಿ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಪಾಲಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


