Friday, October 23, 2026
HomeLocal Newsವಿಶ್ವಸಂಸ್ಥೆಯ ಅಧ್ಯಯನ ಪ್ರವಾಸದಲ್ಲಿ ಸಂಸದ ಕಾಗೇರಿ

ವಿಶ್ವಸಂಸ್ಥೆಯ ಅಧ್ಯಯನ ಪ್ರವಾಸದಲ್ಲಿ ಸಂಸದ ಕಾಗೇರಿ

ಶಿರಸಿ: ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಅ.5ರಿಂದ 9ರವರೆಗೆ ನಡೆಯಲಿರುವ ಸಂಸದರ ನಿಯೋಗದ ಅಧ್ಯಯನ ಪ್ರವಾಸದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕರ್ನಾಟಕದಿಂದ ಏಕೈಕ ಸಂಸದರಾಗಿ ಭಾಗವಹಿಸಲಿದ್ದಾರೆ.

ವಿಶ್ವಸಂಸ್ಥೆಯ ಕಾರ್ಯವೈಖರಿಯನ್ನು ಸಮಗ್ರವಾಗಿ ಪರಿಚಯಿಸಿಕೊಳ್ಳುವ ಉದ್ದೇಶದಿಂದ ಭಾರತದ ಸಂಸದರ ನಿಯೋಗ ಈ ಅಧ್ಯಯನ ಪ್ರವಾಸ ಕೈಗೊಳ್ಳುತ್ತಿದೆ. ಒಂದು ವಾರದ ಅಧ್ಯಯನ ಹಾಗೂ ವಿಚಾರ ವಿನಿಮಯ ಕಾರ್ಯಕ್ರಮದಲ್ಲಿ ಸಂಸದರ ನಿಯೋಗವು ವಿಶ್ವಸಂಸ್ಥೆಯ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಸ್ನೇಹಪರ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಸಭೆಗಳನ್ನು ನಡೆಸಲಿದೆ.

ವಿಶ್ವಸಂಸ್ಥೆಯ ವಿವಿಧ ಸಮಿತಿಗಳ ಕಲಾಪಗಳಲ್ಲಿ ಪಾಲ್ಗೊಳ್ಳುವುದರ ಜೊತೆಗೆ, ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸುವ ಕಾರ್ಯಕ್ರಮವೂ ಇರಲಿದೆ.

ಈ ಅಧ್ಯಯನ ಪ್ರವಾಸವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಸದೀಯ ಅನುಭವವನ್ನು ವಿಸ್ತರಿಸಿಕೊಳ್ಳಲು ನೆರವಾಗಲಿದೆ. ಜಾಗತಿಕ ಮಟ್ಟದ ಈ ಮಹತ್ವದ ನಿಯೋಗದಲ್ಲಿ ಕರ್ನಾಟಕದಿಂದ ಏಕೈಕ ಸಂಸದರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾಗವಹಿಸುತ್ತಿರುವುದು ಜಿಲ್ಲೆಯ ಪಾಲಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share