Ad
Ad
Ad
Home Crime ಭಟ್ಕಳ | 816 ಗ್ರಾಂ ಗಾಂಜಾ ವಶ: ಆರೋಪಿ ಬಂಧನ

ಭಟ್ಕಳ | 816 ಗ್ರಾಂ ಗಾಂಜಾ ವಶ: ಆರೋಪಿ ಬಂಧನ

0
16

ಭಟ್ಕಳ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಭಟ್ಕಳ ಗ್ರಾಮೀಣ ಪೊಲೀಸರು ಮೊಹಮ್ಮದ್ ಸಾಯಿಮ್ ಮೊಹಮ್ಮದ್ ಸಲೀಂ ಖಾಜಿಯಾ ಎಂಬಾತನನ್ನು ಬಂಧಿಸಿ, 816 ಗ್ರಾಂ ತೂಕದ ಗಾಂಜಾ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ.

Ad

ಅ.2ರಂದು ಸಂಜೆ 6.30ರ ಸುಮಾರಿಗೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬಳೆ ಗ್ರಾಮದ ಪಿರ್ದೋಸ ನಗರದ ಕೋಳಿ ಫಾರ್ಮ್‌ ಸಮೀಪ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ಮೇಲಧಿಕಾರಿಗಳಿಗೆ ತಿಳಿಸಿ, ಪಂಚರ ಸಮ್ಮುಖದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಮೊಹಮ್ಮದ್ ಸಾಯಿಮ್ ಮೊಹಮ್ಮದ್ ಸಲೀಂ ಖಾಜಿಯಾ (31) ಭಟ್ಕಳದ (ಮೂಸಾನಗರ, ಬೆಂಡೆಖಾನ್) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನ ಬಳಿಯಿದ್ದ ಕೆಎ-19 ಹೆಚ್‌ಎಲ್-1941 ನೋಂದಣಿ ಸಂಖ್ಯೆಯ ಸ್ಕೂಟಿಯಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 816 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ರೂ.81,600 ಎಂದು ಪೊಲೀಸರು ತಿಳಿಸಿದ್ದಾರೆ. ಗಾಂಜಾ ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಸ್ಕೂಟಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಹಾಗೂ ಭಟ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾನು ಗುಪ್ತಾ ಅವರ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ವೆಂಕಟೇಶ್ ಮೂರ್ನಾಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಪಿಎಸ್‌ಐಗಳಾದ ಮಲ್ಲಿಕಾರ್ಜುನ್ ಕೊರಾಣಿ ಹಾಗೂ ಭರ್ಮಪ್ಪ ಬೆಳಗಲಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ಗೊಂಡ, ಮಂಜುನಾಥ ಖಾರ್ವಿ, ಈರಣ್ಣ ಪೂಜಾರಿ, ಬಾಗಪ್ಪ ಕಡಕಲ್, ನಿಂಗನಗೌಡ ಪಾಟೀಲ್, ಅಂಬರೀಷ್ ಕುಂಬಾರಿ, ವಿನಯ ಮಬ್ರರ, ಸಂತೋಷ ಹಡಪದ, ಚಾಲಕ ಸಂತೋಷ ನಾಯ್ಕ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!