Friday, October 23, 2026
HomeLocal Newsಮಂಜುಗುಣಿ ರಥಬೀದಿಯಲ್ಲಿ ಬಿಜೆಪಿಯಿಂದ ಸ್ವಚ್ಛತಾ ಸೇವೆ

ಮಂಜುಗುಣಿ ರಥಬೀದಿಯಲ್ಲಿ ಬಿಜೆಪಿಯಿಂದ ಸ್ವಚ್ಛತಾ ಸೇವೆ

ಶಿರಸಿ: ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ, ಪ್ರತಿಯೊಬ್ಬರ ದಿನನಿತ್ಯದ ಬದುಕಿನ ಭಾಗವಾಗಬೇಕು ಎಂಬ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ವಿವಿಧೆಡೆ ಸ್ವಚ್ಛತಾ ಕಾರ್ಯಕ್ರಮಗಳು ನಡೆಯುತ್ತಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ‘ಸ್ವಚ್ಛತಾ ಹೀ ಸೇವಾ’ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಮಂಜುಗುಣಿಯಲ್ಲಿ ಸ್ವಚ್ಛತಾ ಸೇವೆ ನಡೆಸಿದರು.

ಬಿಜೆಪಿ ಮಹಾಶಕ್ತಿ ಕೇಂದ್ರ ಜಾನ್ಮನೆ ಹಾಗೂ ಶಕ್ತಿಕೇಂದ್ರ ಮಂಜುಗುಣಿ ವತಿಯಿಂದ ಶ್ರೀ ಕ್ಷೇತ್ರ ಮಂಜುಗುಣಿಯ ರಥಬೀದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕರ್ತರು ರಥಬೀದಿಯ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ಸ್ವಚ್ಛತಾ ಕಾರ್ಯದಲ್ಲಿ ಶಿರಸಿ ಗ್ರಾಮೀಣ ಮಂಡಲ ಪ್ರಧಾನ ಕಾರ್ಯದರ್ಶಿ ಗಣಪತಿ ಹೆಗಡೆ, ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾರಾಯಣ ಹೆಗಡೆ, ಶಕ್ತಿಕೇಂದ್ರ ಅಧ್ಯಕ್ಷರಾದ ಸುನಿಲ್ ಭಟ್ಟ ಬೆಣಗಾವ ಹಾಗೂ ಗಣಪತಿ ನಾಯಕ ಮಂಜುಗುಣಿ ಪಾಲ್ಗೊಂಡಿದ್ದರು.

ಬಿಜೆಪಿ ಕಾರ್ಯಕರ್ತರಾದ ಎಂ.ವಿ. ಹೆಗಡೆ, ನಾಗರಾಜ ಮರಾಠಿ, ಸತೀಶ ಭಟ್ಟ, ನರೇಂದ್ರ ಗೌಡ, ನಾಗರಾಜ ಶೆಟ್ರು ಮಂಜುಗುಣಿ ಸೇರಿದಂತೆ ಇತರರು ಸ್ವಚ್ಛತಾ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಧಾರ್ಮಿಕ ಕ್ಷೇತ್ರಗಳು ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಲ್ಲಿ ಸ್ಥಳೀಯರ ಸಹಭಾಗಿತ್ವವೂ ಮುಖ್ಯವಾಗಿದ್ದು, ಇಂತಹ ಕಾರ್ಯಕ್ರಮಗಳು ಸ್ವಚ್ಛತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ ಎಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಯಿತು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share