Thursday, October 22, 2026
HomeLocal Newsಶಿರಸಿ 110 ಕೆವಿ ಕೇಂದ್ರಕ್ಕೆ ಬೆಂಕಿ: ಸ್ಥಳಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ

ಶಿರಸಿ 110 ಕೆವಿ ಕೇಂದ್ರಕ್ಕೆ ಬೆಂಕಿ: ಸ್ಥಳಕ್ಕೆ ಶಾಸಕ ಭೀಮಣ್ಣ ನಾಯ್ಕ ಭೇಟಿ

ಶಿರಸಿ: ನಗರದ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳದಲ್ಲಿದ್ದ ಹೆಸ್ಕಾಂ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಘಟನೆಗೆ ಸಂಬಂಧಿಸಿದ ಮಾಹಿತಿ ಪಡೆದ ಶಾಸಕರು, ಅಗ್ನಿ ಅವಘಡಕ್ಕೆ ಕಾರಣವಾಗಿರುವ ತಾಂತ್ರಿಕ ಲೋಪದೋಷಗಳು ಹಾಗೂ ಘಟನೆಯಿಂದ ಉಂಟಾಗಿರುವ ನಷ್ಟದ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ, ಅಗ್ನಿ ಅವಘಡದಿಂದಾಗಿ ಶಿರಸಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ದುರಸ್ತಿ ಕಾರ್ಯಗಳನ್ನು ಶೀಘ್ರ ಪೂರ್ಣಗೊಳಿಸಿ, ಆದಷ್ಟು ಬೇಗ ಪೂರ್ಣ ಪ್ರಮಾಣದ ವಿದ್ಯುತ್ ಪೂರೈಕೆಯನ್ನು ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮೂಲಕ ಅಗತ್ಯ ಪ್ರದೇಶಗಳಿಗೆ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಶಾಸಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಟಿಸಿಎಲ್ ಹಾಗೂ ಹೆಸ್ಕಾಂ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share