Friday, March 13, 2026
HomeStateಯುವ ಕಾಂಗ್ರೆಸ್ ಪ್ರತಿಭಟನೆಯಿಂದ ದೇಶದ ಗೌರವಕ್ಕೆ ಧಕ್ಕೆ: ಕಿರಣ್ ಜೈರಾಮ್ ಗೌಡ

ಯುವ ಕಾಂಗ್ರೆಸ್ ಪ್ರತಿಭಟನೆಯಿಂದ ದೇಶದ ಗೌರವಕ್ಕೆ ಧಕ್ಕೆ: ಕಿರಣ್ ಜೈರಾಮ್ ಗೌಡ

ಪಿರಿಯಾಪಟ್ಟಣ: ಜಾಗತಿಕ ವೇದಿಕೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರವಾಗಿ ಹೊರಹೊಮ್ಮುತ್ತಿರುವ ಭಾರತವು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಕ್ಷೇತ್ರದಲ್ಲಿ ನಾಯಕತ್ವ ವಹಿಸುವ ಹಂತದಲ್ಲಿರುವಾಗ, ಯುವ ಕಾಂಗ್ರೆಸ್ ಕಾರ್ಯಕರ್ತರು ಅರಬೆತ್ತಲೆಯಾಗಿ ಪ್ರತಿಭಟನೆ ನಡೆಸಿರುವುದು ದೇಶದ ಗೌರವಕ್ಕೆ ಧಕ್ಕೆ ತರುವ ಹೀನ ಕೃತ್ಯವಾಗಿದೆ ಎಂದು ಮೈಸೂರು ಜಿಲ್ಲಾ ಉಪಾಧ್ಯಕ್ಷ ಕಿರಣ್ ಜೈರಾಮ್ ಗೌಡ ಖಂಡಿಸಿದ್ದಾರೆ.

ಭಾರತ್ ಮಂಟಪದಲ್ಲಿ ನಡೆದ ಜಾಗತಿಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಶೃಂಗಸಭೆಯಲ್ಲಿ ವಿವಿಧ ದೇಶಗಳ ಗಣ್ಯರು ಭಾಗವಹಿಸಿದ್ದಂತಹ ಮಹತ್ವದ ಕಾರ್ಯಕ್ರಮವನ್ನು ಕಾಂಗ್ರೆಸ್ ಕಾರ್ಯಕರ್ತರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು. ಇಂತಹ ನಡೆ ಜಾಗತಿಕ ಮಟ್ಟದಲ್ಲಿ ಭಾರತೀಯರು ತಲೆತಗ್ಗಿಸುವಂತಾಗಿದೆ ಎಂದರು.

ಎನ್‌ಡಿಎ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಭಾರತವನ್ನು ವಿಶ್ವದ ನಾಲ್ಕನೇ ಬಲಿಷ್ಠ ಆರ್ಥಿಕ ಶಕ್ತಿಯನ್ನಾಗಿ ರೂಪಿಸುತ್ತಿರುವ ಸಂದರ್ಭದಲ್ಲಿ, ದೇಶದ ಅಭಿವೃದ್ಧಿಯನ್ನು ಸಹಿಸದ ಕೆಲವರು ಉದ್ದೇಶಪೂರ್ವಕವಾಗಿ ಇಂತಹ ಕೃತ್ಯಗಳಿಗೆ ಕೈಹಾಕಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಯಕರ್ತರ ವಿರುದ್ಧ ತಕ್ಷಣ ಕ್ರಮ ಕೈಗೊಂಡು ಬಂಧಿಸಬೇಕು ಹಾಗೂ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೈತಿಕ ಹೊಣೆ ಹೊತ್ತು ದೇಶದ ಜನತೆಗೆ ಕ್ಷಮೆಯಾಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ವರದಿ :- ಪ್ರಸನ್ನಕುಮಾರ್ ಬಿ. ಎಸ್.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share