Thursday, October 22, 2026
HomeLocal Newsಕೇಂದ್ರದ ಆದೇಶವಿದ್ದರೆ ತೋರಿಸಿ; ಶಾಸಕರಿಗೆ ಬಿಜೆಪಿ ಸವಾಲು

ಕೇಂದ್ರದ ಆದೇಶವಿದ್ದರೆ ತೋರಿಸಿ; ಶಾಸಕರಿಗೆ ಬಿಜೆಪಿ ಸವಾಲು

ಅಂಕೋಲಾ: ಗ್ರಾಮೀಣ ಪ್ರದೇಶಗಳ ಅತಿಕ್ರಮಣ ಜಾಗದಲ್ಲಿರುವ ಆಸ್ತಿಗಳನ್ನು ತೆರಿಗೆ ಪಟ್ಟಿಯಿಂದ ಕೈಬಿಡಲು ಕೇಂದ್ರ ಸರ್ಕಾರದ ಯಾವ ಆದೇಶವಿದೆ ಎಂಬುದನ್ನು ಶಾಸಕ ಭೀಮಣ್ಣ ಟಿ. ನಾಯ್ಕ ಅವರು ಬಹಿರಂಗಪಡಿಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ ಆಗ್ರಹಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಪಂಚಾಯತ್ ರಾಜ್ ಅಧಿನಿಯಮಕ್ಕೆ ತಿದ್ದುಪಡಿ ತಂದು ಅತಿಕ್ರಮಣ ಆಸ್ತಿಗಳನ್ನು ತೆರಿಗೆ ಪಟ್ಟಿಯಿಂದ ಕೈಬಿಡಲು ಆದೇಶಿಸಿದೆ. ಇದನ್ನು ಸಮರ್ಥಿಸಿಕೊಳ್ಳಲಾಗದೆ ಶಾಸಕ ಭೀಮಣ್ಣ ನಾಯ್ಕ ಅವರು ಕೇಂದ್ರದ ನಿರ್ದೇಶನದ ಕಾರಣ ಎಂದು ಹೇಳುತ್ತಿದ್ದಾರೆ ಎಂದು ರಾಜೇಂದ್ರ ನಾಯ್ಕ ಆರೋಪಿಸಿದ್ದಾರೆ.

ಕೇಂದ್ರದ ನಿರ್ದೇಶನವೇ ಇದಕ್ಕೆ ಕಾರಣವಾಗಿದ್ದರೆ ಸಂಬಂಧಿಸಿದ ಸುತ್ತೋಲೆಯನ್ನು ಬಹಿರಂಗಪಡಿಸಲಿ ಹಾಗೂ ರಾಜ್ಯ ಸರ್ಕಾರದ ಆದೇಶವನ್ನು ಸರಿಯಾಗಿ ಪರಿಶೀಲಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.ಅತಿಕ್ರಮಣದಾರರನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ಕ್ರಮವನ್ನು ವಿರೋಧಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಜನಜಾಗೃತಿ ಮೂಡಿಸುತ್ತಿರುವುದನ್ನು ಸಹಿಸಲಾಗದೆ ಶಾಸಕರು ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುತ್ತಿದ್ದಾರೆ ಎಂದು ರಾಜೇಂದ್ರ ನಾಯ್ಕ ಆರೋಪಿಸಿದ್ದಾರೆ.

ಬಡವರ ನೋವು ಅರ್ಥವಾಗುತ್ತಿಲ್ಲ ಎಂದು ಹೇಳುವ ಶಾಸಕರು, ರಾಜ್ಯ ಸರ್ಕಾರದ ಮೇಲೆ ಒತ್ತಡ ತಂದು ಅತಿಕ್ರಮಣದಾರರಿಗೆ ಪಟ್ಟಾ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿ. ಅಲ್ಲದೆ, ಅತಿಕ್ರಮಣ ಆಸ್ತಿಗಳನ್ನು ತೆರಿಗೆ ಪಟ್ಟಿಯಿಂದ ಕೈಬಿಡುವ ಆದೇಶವನ್ನು ಎಷ್ಟು ದಿನದಲ್ಲಿ ಹಿಂಪಡೆಯಲಾಗುತ್ತದೆ ಎಂಬುದನ್ನೂ ಸ್ಪಷ್ಟಪಡಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ಈ ಜನವಿರೋಧಿ ಎಂದು ಬಿಜೆಪಿ ಆರೋಪಿಸಿರುವ ಆದೇಶ ವಾಪಸ್ ಪಡೆಯುವವರೆಗೆ ಪಕ್ಷದ ಹೋರಾಟ ಮುಂದುವರಿಯಲಿದೆ ಎಂದು ರಾಜೇಂದ್ರ ನಾಯ್ಕ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share