Friday, October 23, 2026
HomeLocal Newsಅ.7ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಅ.7ರಂದು ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಕಾರವಾರ: ವಿದ್ಯುತ್ ಮಾರ್ಗಗಳ ನಿರ್ವಹಣೆ ಹಾಗೂ ತುರ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಅ.7ರಂದು ಹೊನ್ನಾವರ, ಕುಮಟಾ ಹಾಗೂ ಕಾರವಾರ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.

ಹೊನ್ನಾವರ ಉಪವಿಭಾಗದ 33/11 ಕೆ.ವಿ. ಗೇರುಸೊಪ್ಪ ವಿದ್ಯುತ್ ವಿತರಣಾ ಉಪಕೇಂದ್ರದ 33 ಕೆ.ವಿ. ಮಾರ್ಗದ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ರೈಟ್ ಕಾಲೋನಿ, ಲೆಫ್ಟ್ ಕಾಲೋನಿ, ಮಾಗೋಡ ಹಾಗೂ ಉಪ್ಪೋಣಿ ಫೀಡರ್‌ಗಳ ವ್ಯಾಪ್ತಿಯಲ್ಲಿ ಅ.7ರಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕುಮಟಾ ಉಪವಿಭಾಗದ 110 ಕೆ.ವಿ. ಕುಮಟಾ ಉಪಕೇಂದ್ರದಲ್ಲಿ 11 ಕೆ.ವಿ. ಧಾರೇಶ್ವರ ಹಾಗೂ 11 ಕೆ.ವಿ. ಬಾಡಾ ಮಾರ್ಗದ ಜಿ.ಒ.ಎಸ್. ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಅಂದು ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಈ ಎರಡೂ ಮಾರ್ಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಕಾರವಾರ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ಲೈನ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಅ.7ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ತೇಲಂಗ ರೋಡ, ನಂದನಗದ್ದಾ, ಕೆ.ಎಚ್.ಬಿ., ಸುಂಕೇರಿ, ಕೋಡಿಬಾಗ ಹಾಗೂ ಕಾರವಾರ ಟೌನ್ ಫೀಡರ್‌ನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಿಗದಿತ ಅವಧಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿರುವುದರಿಂದ ಗ್ರಾಹಕರು ಸಹಕರಿಸುವಂತೆ ಹೊನ್ನಾವರ, ಕುಮಟಾ ಹಾಗೂ ಕಾರವಾರ ಹೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share