ಕಾರವಾರ: ಉದ್ಯಮ ಆರಂಭಿಸಲು ಆಸಕ್ತಿ ಹೊಂದಿರುವ ಪರಿಶಿಷ್ಟ ಪಂಗಡದ ಯುವಕ-ಯುವತಿಯರಿಗಾಗಿ ಅ.22ರಿಂದ 31ರವರೆಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ದಾಂಡೇಲಿಯಲ್ಲಿ ಆಯೋಜಿಸಲಾಗಿದೆ.
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ, ಸಿಡಾಕ್ ಕಾರವಾರ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಅಕಾಡೆಮಿ, ದಾಂಡೇಲಿ ಇವರ ಸಂಯುಕ್ತ ಆಶ್ರಯದಲ್ಲಿ ಟಿ.ಎಸ್.ಪಿ ಯೋಜನೆಯಡಿ ಈ ತರಬೇತಿ ಕಾರ್ಯಕ್ರಮ ನಡೆಯಲಿದೆ.
ದಾಂಡೇಲಿಯ ಕೆಪಿಸಿ ಗೇಟ್, ಬರ್ಚಿ ರಸ್ತೆ, ಗಣಪತಿ ದೇವಸ್ಥಾನದ ಸಮೀಪದ ಅಂಬೇವಾಡಿಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ಅಕಾಡೆಮಿಯಲ್ಲಿ ತರಬೇತಿ ಆಯೋಜಿಸಲಾಗಿದೆ.
ತರಬೇತಿಯಲ್ಲಿ ಸಾಧನಾ ಪ್ರೇರಣೆ, ಉದ್ಯಮಶೀಲತಾ ಸಾಮರ್ಥ್ಯ ಗುರುತಿಸುವಿಕೆ, ವ್ಯವಸ್ಥಾಪನಾ ಕೌಶಲ್ಯ, ಹೊಸ ಉದ್ಯಮ ಸ್ಥಾಪನೆಗೆ ಇರುವ ಅವಕಾಶಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಲೆಕ್ಕಪತ್ರ ನಿರ್ವಹಣೆ, ಮಾರಾಟ ತಂತ್ರಗಳು, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಬ್ಯಾಂಕ್‌ಗಳ ಪಾತ್ರ ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ನೀಡಲಾಗುತ್ತದೆ. ಅಲ್ಲದೆ, ಒಂದು ದಿನ ಕೈಗಾರಿಕಾ ಭೇಟಿ ಏರ್ಪಡಿಸಿ, ಕೈಗಾರಿಕೆಗಳ ಮಾಲೀಕರೊಂದಿಗೆ ನೇರವಾಗಿ ಚರ್ಚಿಸಲು ಅವಕಾಶ ಕಲ್ಪಿಸಲಾಗುತ್ತದೆ.
ಉದ್ಯಮ ಆರಂಭಿಸಲು ಉತ್ಸುಕರಾಗಿರುವ 18ರಿಂದ 45 ವರ್ಷ ವಯಸ್ಸಿನ ಎಸ್‌ಟಿ ಸಮುದಾಯದ ಪುರುಷರು ಮತ್ತು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ಕನಿಷ್ಠ ಎಸ್‌ಎಸ್‌ಎಲ್‌ಸಿ ಶಿಕ್ಷಣ ಪಡೆದಿರಬೇಕು.
ಆಸಕ್ತರು ಅ.21ರೊಳಗೆ ಉಪ ನಿರ್ದೇಶಕರು, ಸಿಡಾಕ್, ಕಾರವಾರ ಅವರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಉಪ ನಿರ್ದೇಶಕ ಶಿವಾನಂದ ವೆಂ. ಎಲಿಗಾರ (ಮೊ. 9448812974) ಅಥವಾ ತರಬೇತಿದಾರೆ ಪ್ರತಿಭಾ ಶಿ. ಹೆಳವಿ (ಮೊ. 9353119412) ಅವರನ್ನು ಸಂಪರ್ಕಿಸಬಹುದು ಎಂದು ಕಾರವಾರ ಸಿಡಾಕ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


