Thursday, October 22, 2026
HomeCrimeಸಾಲದ ಕಂತು ಕಟ್ಟಲು ಒತ್ತಾಯಿಸಿದ ಫೈನಾನ್ಸ್‌ ಮಂದಿ; ಹಲ್ಲೆ-ದೂರು

ಸಾಲದ ಕಂತು ಕಟ್ಟಲು ಒತ್ತಾಯಿಸಿದ ಫೈನಾನ್ಸ್‌ ಮಂದಿ; ಹಲ್ಲೆ-ದೂರು

ಹಳಿಯಾಳ: ಹಣಕಾಸು ಸಂಸ್ಥೆಯಲ್ಲಿ ಪಡೆದ ಸಾಲದ ಕಂತುಗಳನ್ನು ಪಾವತಿಸುವಂತೆ ಒತ್ತಾಯಿಸಿ ಹುಬ್ಬಳ್ಳಿಯ ವಿಸ್ತಾರ ಮೈಕ್ರೋ ಫೈನಾನ್ಸ್‌ ಸಂಸ್ಥೆಯವರು ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದ ನಿಂಗಪ್ಪ ಮಹಾದೇವಪ್ಪ ಧಾರವಾಡಕರ ಅವರ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದ ನಿಂಗಪ್ಪ ಮಹಾದೇವಪ್ಪ ದಾರವಾಡಕರ (54) ಅವರು ನೀಡಿದ ದೂರಿನ ಆಧಾರದ ಮೇಲೆ ಶಿವಕುಮಾರ, ಶೆಟ್ಟಿ ಹಾಗೂ ಇತರರ ವಿರುದ್ಧ ಆರೋಪ ಮಾಡಲಾಗಿದ್ದು, ಆರೋಪಿಗಳು ಹುಬ್ಬಳ್ಳಿ ವಿಸ್ತಾರ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದವರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ದೂರಿನ ಪ್ರಕಾರ, ಅಕ್ಟೋಬರ್ 5ರಂದು ಬೆಳಿಗ್ಗೆ ಸುಮಾರು 11.30ರ ವೇಳೆಗೆ ನಿಂಗಪ್ಪ ಅವರು ಮನೆಯ ಮುಂದಿನ ಕಟ್ಟೆಯ ಮೇಲೆ ಕುಳಿತಿದ್ದಾಗ ಕಪ್ಪು ಬಣ್ಣದ ಕಾರಿನಲ್ಲಿ ಬಂದ ಆರೋಪಿತರು ಅವರ ಬಳಿ ಬಂದು, ಹಣಕಾಸು ಸಂಸ್ಥೆಯಲ್ಲಿ ಪಡೆದ ಸಾಲದ ಮೊತ್ತವನ್ನು ಕಳೆದ ಮೂರು ತಿಂಗಳಿಂದ ಪಾವತಿಸಿಲ್ಲ. ಈಗಲೇ ಹಣ ಕಟ್ಟುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ನಿಂಗಪ್ಪ ಅವರು ಎರಡು-ಮೂರು ದಿನಗಳ ಕಾಲಾವಕಾಶ ನೀಡುವಂತೆ ಕೇಳಿಕೊಂಡಾಗ, ಈಗಲೇ ಹಣ ಪಾವತಿಸದಿದ್ದರೆ ಮನೆಗೆ ಬೀಗ ಹಾಕುವುದಾಗಿ ಆರೋಪಿತರು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನು ಪ್ರಶ್ನಿಸಿದಾಗ ಅವಾಚ್ಯವಾಗಿ ಬೈದು, ಇಬ್ಬರು ಸೇರಿ ಎಳೆದಾಡಿ ದೈಹಿಕ ಹಲ್ಲೆ ನಡೆಸಿದ್ದಾರೆ ಎಂದು ನಿಂಗಪ್ಪ ಆರೋಪಿಸಿದ್ದಾರೆ.

ಇದೇ ವೇಳೆ ಆರೋಪಿತರೊಂದಿಗೆ ಬಂದಿದ್ದ ಇನ್ನೂ 3-4 ಮಂದಿ ಸೇರಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆಯಿಂದ ಗಾಯಗೊಂಡ ನಿಂಗಪ್ಪ ಅವರು ಹಳಿಯಾಳ ತಾಲೂಕು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಮನೆಯವರೊಂದಿಗೆ ಚರ್ಚಿಸಿ ದೂರು ನೀಡಿದ್ದರಿಂದ ಪ್ರಕರಣ ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ತಿಳಿಸಿದ್ದಾರೆ.

ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share