Thursday, October 22, 2026
HomeLocal Newsಬೇಲೇಕೇರಿಯಲ್ಲಿ ನೌಕಾಪಡೆಯ ಜನಪರ ಕಾಳಜಿ; ಆರೋಗ್ಯ, ಶಿಕ್ಷಣಕ್ಕೆ ಒತ್ತು

ಬೇಲೇಕೇರಿಯಲ್ಲಿ ನೌಕಾಪಡೆಯ ಜನಪರ ಕಾಳಜಿ; ಆರೋಗ್ಯ, ಶಿಕ್ಷಣಕ್ಕೆ ಒತ್ತು

ಕಾರವಾರ: ಭಾರತೀಯ ನೌಕಾಪಡೆಯ ಕಾರವಾರ ನೌಕಾ ಡಾಕ್‌ಯಾರ್ಡ್ ವತಿಯಿಂದ ನಾಗರಿಕ–ಸೇನಾ ಸಹಭಾಗಿತ್ವ ಕಾರ್ಯಕ್ರಮದ ಅಂಗವಾಗಿ ಬೇಲೇಕೇರಿ ಗ್ರಾಮದಲ್ಲಿ ಆರೋಗ್ಯ, ಶಿಕ್ಷಣ, ಸ್ವಚ್ಛತೆ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದ ವಿವಿಧ ಜನಪರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಂಗವಾಗಿ ಎರಡು ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಲಾಗಿದ್ದು, ಒಟ್ಟು 120 ಮಂದಿ ಇದರ ಪ್ರಯೋಜನ ಪಡೆದರು. ವೈದ್ಯಕೀಯ ತಪಾಸಣೆ ಹಾಗೂ ಮೂಲ ಆರೋಗ್ಯ ಸೇವೆ ಒದಗಿಸುವುದರ ಜತೆಗೆ ಸಾಮಾನ್ಯ ಸ್ವಚ್ಛತೆ ಮತ್ತು ರೋಗಗಳ ತಡೆಗಟ್ಟುವಿಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಖಾರ್ವಿವಾಡ ಸರ್ಕಾರಿ ಪ್ರಾಥಮಿಕ ಶಾಲೆಯ 150 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್‌ಗಳನ್ನು ವಿತರಿಸಲಾಯಿತು. ಶಾಲೆಯ ದುರಸ್ತಿ ಸೇರಿದಂತೆ ವಿವಿಧ ಸುಧಾರಣಾ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಕಿಟಕಿಗಳಿಗೆ ಸೊಳ್ಳೆ ಪರದೆ ಅಳವಡಿಸಲಾಯಿತು. ವಿದ್ಯಾರ್ಥಿಗಳ ಅನುಕೂಲ ಹಾಗೂ ಶಾಲೆಯ ಸ್ವಚ್ಛತೆ ದೃಷ್ಟಿಯಿಂದ ಶೆಡ್ ನಿರ್ಮಾಣ ಕಾರ್ಯವನ್ನೂ ಕೈಗೊಳ್ಳಲಾಯಿತು.

ಇದರೊಂದಿಗೆ ಗ್ರಾಮದಲ್ಲಿ ಕತ್ತಲಿನಿಂದಾಗಿ ಸಮಸ್ಯೆಯಾಗಬಹುದಾದ ಸ್ಥಳಗಳನ್ನು ಗುರುತಿಸಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಯಿತು. ಆರೋಗ್ಯ, ಶಿಕ್ಷಣ, ಸ್ವಚ್ಛತೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸ್ಥಳೀಯ ಸಮುದಾಯದ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಭಾರತೀಯ ನೌಕಾಪಡೆ ತನ್ನ ಸಾಮಾಜಿಕ ಹೊಣೆಗಾರಿಕೆಯನ್ನು ಮುಂದುವರಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share