ಬನವಾಸಿ: ಹಕ್ಕಲ ಮಾರಿಕಾಂಬಾ ದೇವಸ್ಥಾನದಲ್ಲಿ ದಸರಾ ಹಬ್ಬದ ಅಂಗವಾಗಿ ಅ.11ರಿಂದ ಅ.20ರವರೆಗೆ 10 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದಸರಾ ಆಚರಿಸಲಾಗುತ್ತಿದೆ.
ಅ.11ರ ಭಾನುವಾರದಿಂದ ವಿಜಯದಶಮಿಯ ದಿನವಾದ ಅ.20ರವರೆಗೆ ಪ್ರತಿದಿನ ದೇವಿಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ದಸರಾ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.
ದೇವಿಗೆ ವಿಶೇಷ ಪೂಜೆ ಸಲ್ಲಿಸಲು ಇಚ್ಛಿಸುವ ಭಕ್ತರು ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದ್ದು, ಈ ಮೂಲಕ ದೇವಿಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಹಕ್ಕಲ ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ರಾಮದಾಸ್ ಚೌಧರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


