Thursday, October 22, 2026
HomeLocal Newsಸರ್ಕಾರಿ, ಅರಣ್ಯ ಜಾಗದ ಆಸ್ತಿ ತೆರಿಗೆ ಸುತ್ತೋಲೆಗೆ ತಾತ್ಕಾಲಿಕ ತಡೆ

ಸರ್ಕಾರಿ, ಅರಣ್ಯ ಜಾಗದ ಆಸ್ತಿ ತೆರಿಗೆ ಸುತ್ತೋಲೆಗೆ ತಾತ್ಕಾಲಿಕ ತಡೆ

ಬೆಂಗಳೂರು: ಸರ್ಕಾರಿ, ಅರಣ್ಯ ಭೂಮಿಯಲ್ಲಿನ ಆಸ್ತಿಗಳನ್ನು ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಕೈಬಿಡುವ ಸಂಬಂಧ ಆಗಸ್ಟ್ 13ರಂದು ಹೊರಡಿಸಲಾಗಿದ್ದ ಸುತ್ತೋಲೆಗೆ ತಾತ್ಕಾಲಿಕ ತಡೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವರು, ಉಭಯ ಸದನಗಳಲ್ಲಿ ಅನುಮೋದನೆಗೊಂಡು ರಾಜ್ಯಪಾಲರ ಅಂಗೀಕಾರ ಪಡೆದ ಕಾಯಿದೆಗೆ ಸಂಬಂಧಿಸಿದಂತೆ ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಈ ವಿಚಾರವಾಗಿ ಮುಖ್ಯಮಂತ್ರಿ ಅವರು ಈಗಾಗಲೇ ಸದನದಲ್ಲಿ ಭರವಸೆ ನೀಡಿದ್ದು, ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆಯ ಜಂಟಿ ಸರ್ವೆ ಪೂರ್ಣಗೊಳ್ಳುವವರೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಕಂದಾಯ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿದಂತೆ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಿ, ಸಮಗ್ರ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಭೀಮಣ್ಣ ಟಿ. ನಾಯ್ಕ ಹಾಗೂ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಈ ವೇಳೆ ಸುತ್ತೋಲೆಯ ಕುರಿತು ಸಚಿವರು ಸ್ಪಷ್ಟನೆ ನೀಡಿದ್ದು, ತಾತ್ಕಾಲಿಕ ತಡೆ ನೀಡಲಾಗುವುದು ಹಾಗೂ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ ಎಂದು ಸಚಿವರು ಪುನರುಚ್ಚರಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share