Ad
Ad
Ad
Home Local News ಬಿಳಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಬಿಳಗಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0
16

ಸಿದ್ದಾಪುರ: ತಾಲೂಕಿನ ಬಿಳಗಿ ಸೇವಾ ಸಹಕಾರಿ ಸಂಘದ ಆವರಣದಲ್ಲಿ ಬಿಜೆಪಿ ವತಿಯಿಂದ ಸೇವಾ ಸಂಕಲ್ಪ, ಸೇವಾ ಸೇತು ಕಾರ್ಯಕ್ರಮದ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಕ್ರಮ ನಡೆಯಿತು.

Ad

ಕುಮಟಾ ಶಾಸಕ ದಿನಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ ಅವಧಿಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳ ಕುರಿತು ವಿವರಿಸಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಉಜ್ವಲ ಯೋಜನೆ ಹಾಗೂ ಆಯುಷ್ಮಾನ್ ಭಾರತ್ ಸೇರಿದಂತೆ ವಿವಿಧ ಯೋಜನೆಗಳು ಜನರಿಗೆ ನೆರವಾಗಿವೆ ಎಂದು ಹೇಳಿದರು.

ಶಿವಮೊಗ್ಗ ವಿಭಾಗದ ಸಹಪ್ರಭಾರಿ ಆರ್.ಡಿ. ಹೆಗಡೆ ಮಾತನಾಡಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜನಧನ, ಮುದ್ರಾ, ಪ್ರಧಾನ ಮಂತ್ರಿ ವಿಮಾ ಯೋಜನೆಗಳು ಹಾಗೂ ಜನೌಷಧ ಕೇಂದ್ರಗಳ ಮೂಲಕ ದೊರೆಯುವ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಅಗತ್ಯವಿದೆ ಎಂದರು.

ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಕಾರ್ಯಕ್ರಮದ ಸಂಚಾಲಕ ವೆಂಕಟೇಶ ನಾಯಕ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅವುಗಳ ಪ್ರಯೋಜನಗಳ ಕುರಿತು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಪಶ್ಚಿಮ ಘಟ್ಟ ಕಾರ್ಯಪಡೆಯ ಮಾಜಿ ಅಧ್ಯಕ್ಷ ಗೋವಿಂದ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿಬಿರದಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಕಣ್ಣಿನ ತಪಾಸಣೆ ನಡೆಸಲಾಯಿತು. ಸೇವಾ ಸೇತು ಕಾರ್ಯಕ್ರಮದ ಮೂಲಕ ಆಯುಷ್ಮಾನ್ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದ ಮಾಹಿತಿ ನೀಡಲಾಯಿತು.

ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅನಂತಮೂರ್ತಿ ಹೆಗಡೆ, ಕೆಡಿಸಿಸಿ ಬ್ಯಾಂಕ್ ಹಾಗೂ ಬಿಳಗಿ ಸೇವಾ ಸಹಕಾರಿ ಸಂಘದ ನಿರ್ದೇಶಕ ರಾಘವೇಂದ್ರ ಶಾಸ್ತ್ರಿ, ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ನಂದನ ಬೋರ್ಕರ್, ಬಿಳಗಿ ಶಕ್ತಿ ಕೇಂದ್ರದ ಪ್ರಮುಖ ರಮಾನಂದ ಮಡಿವಾಳ, ಸಿದ್ದಾಪುರ ತಾಲೂಕು ಬಿಜೆಪಿಯ ಮಾಜಿ ಅಧ್ಯಕ್ಷ ಮಾರುತಿ ನಾಯ್ಕ, ಬಿಜೆಪಿ ಮುಖಂಡರಾದ ಗಿರೀಶ್ ಶೇಟ್, ಅಣ್ಣಪ್ಪ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸಿದ್ದಾಪುರ ಮಂಡಳ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಸ್ವಾಗತಿಸಿದರು. ಮಹೇಶ ನಾಯ್ಕ ವಂದಿಸಿದರು. ಆದರ್ಶ ಪೈ ಸಹಕರಿಸಿದರು.

NO COMMENTS

LEAVE A REPLY

Please enter your comment!
Please enter your name here

error: Content is protected !!