Thursday, October 22, 2026
HomeCrimeಯಲ್ಲಾಪುರ | ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ವಿರುದ್ಧ ಪ್ರಕರಣ

ಯಲ್ಲಾಪುರ | ಅಕ್ರಮವಾಗಿ ಜಾನುವಾರು ಸಾಗಾಟ: ಇಬ್ಬರ ವಿರುದ್ಧ ಪ್ರಕರಣ

ಯಲ್ಲಾಪುರ: ಅಕ್ರಮವಾಗಿ ಮೂರು ಜಾನುವಾರುಗಳನ್ನು ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನವನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದು, ಜಾನುವಾರುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಧಾರವಾಡ ಜಿಲ್ಲೆಯ ಕಲಘಟಗಿಯ ಇಬ್ಬರ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿತರನ್ನು ಕಲಘಟಗಿಯ ಗಾಂಧಿನಗರದ ಕಿಮ್ಸ್ ಆಸ್ಪತ್ರೆ ರಸ್ತೆ ನಿವಾಸಿ, ವಾಹನ ಚಾಲಕ ಮಂಜುನಾಥ ಸೋಮಯ್ಯ ರುದ್ರಾಕ್ಷಿ (39) ಹಾಗೂ ಕಲಘಟಗಿಯ ಬಸ್ ನಿಲ್ದಾಣದ ಹಿಂಭಾಗದ ಚರ್ಚ್ ರಸ್ತೆ ನಿವಾಸಿ ಅಲ್ತಾಫ್ ಹಜರೇಸಾಬ ಉಡೇಕರ (35) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 9ರಂದು ಮಧ್ಯಾಹ್ನ 3.30ರ ಸುಮಾರಿಗೆ ಅಂಕೋಲಾದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕೆಎ-25/ಎಬಿ-6161 ನೋಂದಣಿ ಸಂಖ್ಯೆಯ ಅಶೋಕ ಲೈಲ್ಯಾಂಡ್ ವಾಹನವನ್ನು ಯಲ್ಲಾಪುರ ಪಟ್ಟಣದ ಮಲಬಾರ್ ಹೋಟೆಲ್ ಎದುರು ಪೊಲೀಸರು ತಡೆದು ಪರಿಶೀಲಿಸಿದ್ದಾರೆ.

ವಾಹನದ ಹಿಂಭಾಗದಲ್ಲಿ ಎರಡು ಕಪ್ಪು ಬಣ್ಣದ ಹೋರಿಗಳು ಹಾಗೂ ಒಂದು ಕಂದು ಬಣ್ಣದ ಆಕಳ ಕರು ಸೇರಿದಂತೆ ಮೂರು ಜಾನುವಾರುಗಳನ್ನು ಸಾಗಿಸಲಾಗುತ್ತಿರುವುದು ಕಂಡುಬಂದಿದೆ.

ಜಾನುವಾರುಗಳನ್ನು ಸಾಗಿಸಲು ಅಗತ್ಯ ಪರವಾನಗಿ ಪಡೆಯದೆ, ಅವುಗಳಿಗೆ ಸರಿಯಾಗಿ ಮಲಗಲು ಸಾಧ್ಯವಾಗದ ರೀತಿಯಲ್ಲಿ ಹಗ್ಗದಿಂದ ಕಟ್ಟಿ ಸಾಗಿಸಲಾಗುತ್ತಿತ್ತು. ಅಲ್ಲದೆ, ಅವುಗಳನ್ನು ವಧೆಗಾಗಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸಲಾಗುತ್ತಿತ್ತು ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಪೊಲೀಸರು ಮೂರು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳ ಅಂದಾಜು ಮೌಲ್ಯ 26 ಸಾವಿರ ರೂ ಮತ್ತು ವಾಹನದ ಅಂದಾಜು ಮೌಲ್ಯ 2 ಲಕ್ಷ ರೂ ಎಂದು ದಾಖಲೆಯಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಪಿಎಸ್‌ಐ ರಾಜಶೇಖರ ವಂದಲಿ ನೀಡಿದ ದೂರಿನ ಆಧಾರದಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share